ಬೆಳಗಾವಿ : ಹಣಕ್ಕಾಗಿ ಅನಗತ್ಯ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಐದು ವರ್ಷಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ. 34-38, ಖಾಸಗಿ ಆಸ್ಪತ್ರೆಗಳಲ್ಲಿ ಶೇ.62ರಷ್ಟು ಹೆರಿಗೆ ನಡೆಯುತ್ತಿದೆ. ದೊಡ್ಡ ನಗರಗಳಲ್ಲಿ ಸಿಸೇರಿಯನ್ ಸಂಖ್ಯೆ ಜಾಸ್ತಿಯಾಗಿದೆ. ಯಾಕೆ ಸಿಸೇರಿಯನ್ ಹೆರಿಗೆ ಜಾಸ್ತಿಯಾಗುತ್ತಿದೆ ಎಂಬುದನ್ನು ತಿಳಿಯಲು ಪ್ರಾಯೋಗಿಕವಾಗಿ ತುಮಕೂರು ಜಿಲ್ಲೆಯಲ್ಲಿ ಆಡಿಟ್ ಮಾಡಲಾಗುತ್ತದೆ ಎಂದರು.
ಇತ್ತೀಚಿನ ವರ್ಷಗಳಲ್ಲಿ ಸಿಸೇರಿಯನ್ ಹೆರಿಗೆ ಹೆಚ್ಚಳವಾಗಲು ಗರ್ಭಿಣಿ ಮಹಿಳೆಯರ ಭಯ, ಆತಂಕ ಸೇರಿದಂತೆ ಕುಟುಂಬದ ಸದಸ್ಯರೂ ಕಾರಣರಾಗಿದ್ದಾರೆ.ಈಬಗ್ಗೆ ಅವರಿಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಹೇಳಿದ್ದಾರೆ.
ಹಣಕ್ಕಾಗಿ ಅನಗತ್ಯ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ
– @dineshgrao , ಆರೋಗ್ಯ ಸಚಿವರು pic.twitter.com/5B4TCS5lMQ
— DIPR Karnataka (@KarnatakaVarthe) December 8, 2025








