ಬೆಂಗಳೂರು : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಈ ಮೂಲಕ ಇಲಾಖಾ ವ್ಯಾಪ್ತಿಯ ಎಲ್ಲಾ ಪ್ರಾದೇಶಿಕ ಜಂಟಿ ನಿರ್ದೇಶಕರಿಗೆ ಹಾಗೂ ಸರ್ಕಾರಿ / ಖಾಸಗಿ ಅನುದಾನಿತ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸುವುದೇನೆಂದರೆ, ಉಲ್ಲೇಖಿತ ಸರ್ಕಾರದ ಪತ್ರದಲ್ಲಿ ಮಹಿಳೆಯರು ಸುರಕ್ಷಿತವಾಗಿ ಕೆಲಸ ನಿರ್ವಹಿಸುವ ವಾತಾವರಣವನ್ನು ಕಲ್ಪಿಸಲು POSH ಕಾಯ್ದೆ 2013ನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯದ ದಿನಾಂಕ : 03.12.2024ರ ಆದೇಶದಲ್ಲಿ (ಪ್ರತಿ ಲಗತ್ತಿಸಿದೆ) ನೀಡಿದ ನಿರ್ದೇಶನಗಳನ್ವಯ ಮಹಿಳಾ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಮತ್ತು ವರದಿ ನೀಡುವ ತಜ್ಞರ ಸಮಿತಿಯ ಅಂತಿಮ ವರದಿಯ ಶಿಫಾರಸ್ಸುಗಳು ಹಾಗೂ ರಾಷ್ಟ್ರೀಯ ಮಹಿಳಾ ಆಯೋಗವು ಸೂಚಿಸಿರುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ .(ಕೈಗೊಳ್ಳಬೇಕಾದ ಕ್ರಮಗಳ ಪಟ್ಟಿ ಲಗತ್ತಿಸಿದೆ) ಹಾಗೂ ಸಮಿತಿಯು ಈ ಎಲ್ಲಾ ಸುತ್ತೋಲೆಗಳನ್ನು ಉಲ್ಲೇಖ(1)ರಂತೆ ರಚಿಸಿರುವ ಲೈಂಗಿಕ ಕಿರುಕುಳ ನಿವಾರಣಾ ಸಮಿತಿಯ ಸಂಚಾಲಕರಿಗೆ ಒದಗಿಸುವುದು ಮತ್ತು ಸರ್ಕಾರದ ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವಂತೆ ತಿಳಿಸಲು ಮತ್ತು ಸಮಿತಿಯು ಸಕ್ರಿಯವಾಗಿರುವುದನ್ನು ಪರಿಶೀಲಿಸಲು ಸೂಚಿಸಲಾಗಿದೆ.