ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ಇಂದು ನಡೆಯಲಿದೆ.
ನಟ ದರ್ಶನ್ ಪರ ವಕೀಲ ಎಸ್ ಸುನಿಲ್ ಕುಮಾರ್ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾ. ಎಸ್. ವಿಶ್ವಜೀತ್ ಅವರಿದ್ದ ಹೈಕೋರ್ಟ್ ಏಕ ಸದಸ್ಯಪೀಠದಲ್ಲಿ ವಿಚಾರಣೆ ನಡೆಯಲಿದೆ.
ಈಗಾಗಲೇ ಕೊಲೆ ಪ್ರಕರಣದಲ್ಲಿ ಹಲವು ಆರೋಪಿಗಳಿಗೆ ಜಾಮೀನು ದೊರೆತಿದೆ. ಆದರೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ಹಾಗೂ ನಟ ದರ್ಶನ್ ಸೇರಿದಂತೆ ಇನ್ನೂ ಕೆಲವು ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿಲ್ಲ ಹಾಗಾಗಿ ಇದೇ ಅಕ್ಟೋಬರ್ 28 ರ ಇಂದು ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹಾಗಾಗಿ ಇಂದು ಅವರಿಗೆ ಮಹತ್ವದ ದಿನವಾಗಿದೆ ಎಂದು ಹೇಳಲಾಗುತ್ತಿದೆ.