ಹುಬ್ಬಳ್ಳಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿರುವುದರಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಬಳ್ಳಾರಿ ಜೈಲಿಗೆ ವರ್ಗ ಮಾಡಿರುವುದರಲ್ಲಿ ನನ್ನ ಪಾತ್ರವೇನೂ ಇಲ್ಲ. ಅದನ್ನು ಪೊಲೀಸ್ ಇಲಾಖೆ, ಕಾರಾಗೃಹ ಇಲಾಖೆ ಮಾಡಿದೆ. ನಾನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಅಷ್ಟೇ, ಡಿಜಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಬಿಜೆಪಿಯವರಿಗೆ ಹಿಂದುಳಿದ ನಾಯಕನಾಗಿರುವಂತ ಸಿಎಂ ಸಿದ್ಧರಾಮಯ್ಯ ಅವರನ್ನು ಸಹಿಸಲು ಆಗ್ತಿಲ್ಲ. ಈ ಕಾರಣಕ್ಕೆ ಮುಡಾ ಹಗರಣ ಹೊರತಂದಿದ್ದಾರೆ. ಸಿಎಂ ಸಿದ್ಧರಾಮಯ್ಯ ಟಗರು ಇದ್ದಂತೆ. ಯಾರಿಗೂ ಯಾವತ್ತಿಗೂ ಭಯ ಬೀಳೋದಿಲ್ಲ ಎಂಬುದಾಗಿ ತಿಳಿಸಿದರು.