ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಬೆನ್ನು ನೋವಿನ ಸಮಸ್ಯೆ ಹಿನ್ನೆಲೆ ನಟ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.ಹಾಗಾಗಿ ನಟ ದರ್ಶನ್ ಇಂದು ಬೆಂಗಳೂರಿನ ಹೊರವಲಯದಲ್ಲಿರುವ ಕೆಂಗೇರಿಯ BGS ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೌದು ಇಂದು ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನ್ ಅವರು ಬೆನ್ನು ನೋವಿನ ಚಿಕಿತ್ಸೆ ಪಡೆದುಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈ ಕೋರ್ಟ್ ಕೇವಲ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದ್ದು ಈ ಹಿನ್ನಲೆಯಲ್ಲಿ ಬಿಡುಗಡೆಯಾದ ತಕ್ಷಣ ಒಂದು ವಾರದ ಒಳಗೆ ಮೈಲಿಕೀಯ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ದರ್ಶನ್ ದಾಖಲಾಗಿದ್ದಾರೆ. ಆ ಬಳಿಕ ವೈದ್ಯ ನವೀನ್ ಅಪ್ಪಾಜಿ ಗೌಡ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬೆನ್ನು ನೋವಿನಿಂದ ದರ್ಶನ್ ಅವರು ಇಂದು 3.30ರ ಸುಮಾರಿಗೆ ಬಂದು ಅಡ್ಮಿಟ್ ಆಗಿದ್ದಾರೆ. ನಾವು ತಪಾಸಣೆ ಮಾಡಿದ್ದೇನೆ. ಕಾಲು ನೋವು ಇದೆ. ಅದರಿಂದ ಬೆನ್ನು ನೋವು ಕೂಡ ಇದೆ.
ಎಡಗಡೆ ಕಾಲಿನಲ್ಲಿ ವೀಕ್ನೆಸ್ ಇದೆ. ಆ ಕಾಲ ಆಡುವುದು ಸ್ವಲ್ಪ ಕಮ್ಮಿ ಆಗಿದೆ. ಹೆಚ್ಚಿನ ತಪಾಸಣೆ ಮಾಡಿ, ಯಾವ ರೀತಿ ಚಿಕಿತ್ಸೆ ಬೇಕು ಎಂಬುದನ್ನು ನಿರ್ಧರಿಸುತ್ತೇವೆ. ಪೂರ್ತಿ ತಪಾಸಣೆ ಆದ ನಂತರ ಏನಾಗಿದೆ ಎಂಬುದು ನಮಗೆ ಗೊತ್ತಾಗುತ್ತದೆ. ಎಂಆರ್ಐ, ಎಕ್ಸ್ರೇ ಮತ್ತು ರಕ್ತದ ಪರೀಕ್ಷೆ ಮಾಡಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.
ಒಂದು ವಾರದ ಹಿಂದೆ ಮಾಡಿದ ಎಂಆರ್ಐ ಫಿಲ್ಮ್ ನಮಗೆ ಲಭ್ಯವಾಗಿಲ್ಲ. ಆದ್ದರಿಂದ ಇನ್ನೊಮ್ಮೆ ಎಂಆರ್ಐ ಮಾಡಬೇಕಾಗುತ್ತದೆ. ಸದ್ಯಕ್ಕೆ ಅವರಿಗೆ ತುಂಬ ನೋವು ಇದೆ. ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆಯೋ ಇಲ್ಲವೋ ಎಂಬುದು ಈಗಲೇ ಹೇಳೋಕೆ ಆಗಲ್ಲ. 24ರಿಂದ 48 ಗಂಟೆಯ ಒಳಗೆ ಎಲ್ಲ ರಿಪೋರ್ಟ್ಗಳು ಸಿಗುತ್ತವೆ. ತುಂಬ ನೋವು ಇರುವುದರಿಂದ ಔಷಧಿ ನೀಡಲು ಆರಂಭಿಸಿದ್ದೇವೆ ಎಂದು ತಿಳಿಸಿದರು.