ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ 131 ದಿನಗಳ ಬಳಿಕ ಸೆರೆವಾಸದಿಂದ ಮುಕ್ತಿ ಪಡೆದಿರುವ ನಟ ದರ್ಶನ್ಗೆ ಇಂದು ಬಿಗ್ ಡೇ ಆಗಿದೆ. ನಟ ದರ್ಶನ್ ಪವಿತ್ರಾ ಗೌಡ ಸೇರಿ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.
ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಜಾಮೀನು ರದ್ದು ಕೋರಿದ ಸರ್ಕಾರದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ವೇಳೆ ವಿಚಾರಣೆಯನ್ನು ಸುಪ್ರೀಂಕೋರ್ಟ್ ದ್ವೀ ಸದಸ್ಯ ಪೀಠ ಮುಂದೂಡಿರು. ಈ ವೇಳೆ ಬಂಧನದ ಕಾರಣಗಳನ್ನು ಅಷ್ಟೇ ನಾವು ಕೇಳುತ್ತಿದ್ದೇವೆ ಬೇರೆ ಕೇಳುತ್ತಿಲ್ಲ.ನಟ ದರ್ಶನ್ ಗೆ ಯಾಕೆ ಜಾಮೀನು ಕೊಡಬಾರ್ದು? ಬಂಧನ ಕಾನೂನು ಬದ್ಧವಾಗಿಲ್ಲ ಎನ್ನುವುದಾಗಿದೆ ಇದಕ್ಕೆ ಉತ್ತರ ಕೊಡಿ. ಎಂದು ರಾಜ್ಯ ಸರ್ಕಾರದ ಪರ ವಕೀಲರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತು ಬಳಿಕ ವಿಚಾರಣೆಯನ್ನು ಜುಲೈ 22ಕ್ಕೆ ಅರ್ಜಿ ವಿಚಾರಣೆ ಮುಂದೂಡಿತು.
ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಡಿಸೆಂಬರ್ 2024ರಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಿದೆ.