ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಮೊದಲ ಬಾರಿಗೆ ಇಂದು ಕೋರ್ಟ್ ಗೆ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಇಂತಹ ಅರ್ಜಿಯ ವಿಚಾರಣೆ ಇಂದು ನಡೆಯಲಿದ್ದು, ಎಲ್ಲರ ಚಿತ್ತ ಕೋರ್ಟ್ ನತ್ತ ನೆಟ್ಟಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಇದರ ಬೆನ್ನಲ್ಲೇ ದರ್ಶನ್ ಜಾಮೀನು ಕೋರಿ ಸೆಪ್ಟೆಂಬರ್ 21ರಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ .ಇಂದು ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ನ್ಯಾಯಮೂರ್ತಿ ಜೈ.ಶಂಕರ್ ಅವರು ವಿಚಾರಣೆ ನಡೆಸಲಿದ್ದಾರೆ.
ಅಂದಹಾಗೇ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ವಿಚಾರ ಬೆಳಕಿಗೆ ಬಂದ ನಂತ್ರ ಬಳ್ಳಾರಿ ಜೈಲಿನಲ್ಲಿದ್ದಾರೆ. ಅವರು ಅಲ್ಲಿಂದಲೇ ತಮ್ಮ ಪರ ವಕೀಲ ಸುನೀಲ್ ಮೂಲಕ ಜಾಮೀನಿಗಾಗಿ ಮೊದಲ ಬಾರಿಗೆ ಅರ್ಜಿಯನ್ನು ಸಲ್ಲಿಸಿದ್ದರು.
ಮೊದಲ ಬಾರಿಗೆ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದಾಗ, ಅರ್ಜಿಯಲ್ಲಿ ರೇಣುಕಾ ಸ್ವಾಮಿ ಕೊಲೆಗೂ ಹಾಗೂ ದರ್ಶನ್ಗು ಯಾವುದೇ ರೀತಿಯಾದಂತಹ ಸಂಬಂಧ ಇಲ್ಲ ಎಂಬ ಮಾಹಿತಿ ಉಲ್ಲೇಖಿಸಲಾಗಿದೆ. ಹಾಗಾದರೆ ರೇಣುಕಾಸ್ವಾಮೆಯನ್ನು ಕಿಡ್ನ್ಯಾಪ್ ಮಾಡಿ ಬೆಂಗಳೂರಿಗೆ ಕರೆತಂದಿದ್ದು ಯಾರು? ಮುಂದೆ ಓದಿ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ದರ್ಶನ್ ಗೂ ಯಾವುದೇ ಸಂಬಂಧವಿಲ್ಲ. ಆದರೆ ಸುಮ್ಮನೆ ದರ್ಶನ್ ಹೆಸರನ್ನು ಎಳೆದು ತರಲಾಗಿದೆ. ರೇಣುಕಾಸ್ವಾಮಿ ಅಪಹರಣ ಮಾಡಲು ನಾನು ಸೂಚನೆ ನೀಡಿಲ್ಲ. ರೇಣುಕಾಸ್ವಾಮಿ ಹತ್ಯೆಯಲ್ಲಿ ನನ್ನ ಪಾತ್ರವಿಲ್ಲ. ಎ10 ಆರೋಪಿ ವಿನಯ್ ಹಾಗೂ ಎ3 ಆರೋಪಿ ಪವನ್ ಸೂಚನೆ ಮೇರೆಗೆ ಅಪಹರಣ ಮಾಡಲಾಗಿದೆ ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಆಗಿರುವ ದರ್ಶನ್ ತಮ್ಮ ವಕೀಲರ ಮೂಲಕ ನಿನ್ನೆ ಮೊದಲ ಬಾರಿಗೆ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಹಾಗಾಗಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ.