ಬೆಂಗಳೂರು : ನಿನ್ನೆ ತಾನೆ ಸಾರಿಗೆ ಬಸ್ಗಳಲ್ಲಿ ಶೇ. 15 ರಷ್ಟು ಟಿಕೆಟ್ ದರ ಏರಿಕೆ ಮಾಡಿ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಇದರ ಬೆನ್ನೆಲ್ಲಿ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು ಶೀಘ್ರದಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಹಾಲಿನ ದರ ಏರಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಕೆ ವೆಂಕಟೇಶ್ ಮಾತನಾಡಿದ್ದು, ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. 5 ರೂ, 3 ರೂ, 10 ರೂ. ಮಾಡುತ್ತೇವೋ ಅದು ಇನ್ನೂ ತೀರ್ಮಾನ ಆಗಿಲ್ಲ ಎಂದು ತಿಳಿಸಿದರು.
ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರ ಒತ್ತಾಯ ಇದೆ. ಯಾಕೆಂದರೆ ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ ಆಗಿದೆ. ಈ ಹಿನ್ನೆಲೆ ಹಾಲಿನ ದರ 10 ರೂ. ಏರಿಕೆ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ನಾವಿನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಬಳಿಕ ಅಂತಿಮ ತೀರ್ಮಾನ ಮಾಡುತ್ತೇವೆ ಎಂದರು.