ಬೆಂಗಳೂರು : ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸೋ ಕಾಲ ಸಮೀಪಿಸಿದೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲು ಸೆಪ್ಟೆಂಬರ್.16, 2025ರ ನಾಳೆ ಸಭೆಯನ್ನು ಸರ್ಕಾರ ಕರೆಯಲಾಗಿದೆ.
ಸರ್ಕಾರದ ಕಾರ್ಯದರ್ಶಿಗಳು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ದಿನಾಂಕ:16.09.2025ರ ನಾಳೆ ಮಧ್ಯಾಹ್ನ 3.00 ಗಂಟೆಗೆ ಕೊಠಡಿ ಸಂಖ್ಯೆ:331, 3ನೇ ಮಹಡಿ, ಬಹುಮಹಡಿಗಳ ಕಟ್ಟಡ ಇಲ್ಲಿ ಈ ಕೆಳಕಂಡ ವಿಷಯಗಳ ಕುರಿತು ಚರ್ಚಿಸಲು ಸಭೆಯನ್ನು ಏರ್ಪಡಿಸಲಾಗಿದೆ.
ಇನ್ನು ಬೆಂಗಳೂರಿನಲ್ಲಿ ಪರಿಶಿಷ್ಟ ಪಂಗಡ ಪಟ್ಟಿಗೆ ಕುರುಬ ಸಮುದಾಯ ಸೇರ್ಪಡೆ ವಿಚಾರವಾಗಿ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿದ್ದು, ಬೇಡಿಕೆ ಇತ್ತು ಈ ಬಗ್ಗೆ ನಾವು ದಾಖಲೆ ಕೇಳಿದ್ದೆವು. ನಾಳೆ ಬೆಂಗಳೂರಿನಲ್ಲಿ ಕುರುಬ ಸಮುದಾಯದ ಸಭೆ ಕರೆದಿದ್ದಾರೆ ಅದಾದ ಮೇಲೆ ಕೋಲಿ ಸಮುದಾಯದ ಸಭೆ ಕೂಡ ಮಾಡುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.