ಬೆಂಗಳೂರು: ಇನ್ಮುಂದೆ ಸಾರ್ವಜನಿಕರನ್ನು ಭೇಟಿ ಮಾಡಲು, ಅವರ ಕುಂದುಕೊರತೆಯನ್ನು ನಿವಾರಿಸುವುದು ಕಡ್ಡಾಯವಾಗಿದೆ. ಈ ಸಮಯಲ್ಲಿ ಯಾವುದೇ ಸಭೆಗಳನ್ನು ನಡೆಸದಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಅವರು,ಜನಸ್ಪಂದನ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ನಾಗರೀಕರು ಅವರ ಅಹವಾಲುಗಳೊಂದಿಗೆ ಬರುತ್ತಿರುವುದರಿಂದ ಹಿರಿಯ ಅಧಿಕಾರಿಗಳು ಎಲ್ಲಾ ಹಂತಗಳಲ್ಲಿ ಅರ್ಜಿದಾರರಿಗೆ ನಿಯಮಿತವಾಗಿ ಆಲಿಸಿದರ ಮಾತ್ರ ಕುಂದುಕೊರತೆಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗುವುದು ಎಂದಿದ್ದಾರೆ.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಹಾಗೂ ಇತರ ಕ್ಷೇತ್ರ ಅಧಿಕಾರಿಗಳು ಮಧ್ಯಾಹ್ನ 3.30 ಘಂಟೆಯಿಂದ 5.30 ಘಂಟೆಯವರೆಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳನ್ನು ಭೇಟಿ ಮಾಡಲು ಸಮಯವನ್ನು ಕಲ್ಪಿಸುವ ಬಗ್ಗೆ ನಿರ್ದೇಶನ ನೀಡಲಾಗಿದೆ. ಆದಾಗ್ಯೂ, ಈ ಸಮಯದಲ್ಲಿ ಸಾರ್ವಜನಿಕರಿಗೆ ಸಮಯಾವಕಾಶ ಕಲ್ಪಿಸದ ಇಲಾಖೆಗಳ ಸಭೆಗಳನ್ನು/ಕಛೇರಿಯ ಹೊರಗೆ ಹೋಗುವ ಪ್ರಕರಣಗಳನ್ನು ಗಮನಿಸಲಾಗಿದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ, ಇನ್ನು ಮುಂದ ಎಲ್ಲಾ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಮತ್ತು ಇತರ ಅಧಿಕಾರಿಗಳು ಪ್ರತಿ ದಿನ (ಸಾರ್ವಜನಿಕ ರಜೆ ಹೊರತುಪಡಿಸಿ) ಮಧ್ಯಾಹ್ನ 3.30 ಘಂಟೆಯಿಂದ 5.00 ಘಂಟೆಯವರೆಗೆ ಯಾವುದೇ ಸಭೆಗಳನ್ನು ನಿಗದಿಪಡಿಸದ (ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ) ಸಾರ್ವಜನಿಕರನ್ನು ಭೇಟಿ ಮಾಡುವುದು ಹಾಗೂ ಅವರ ಕುಂದುಕೊರತೆಗಳನ್ನು ಜನಸ್ಪಂದನಾ ತಂತ್ರಾಂಶದಲ್ಲಿ ದಾಖಲಿಸಿ ಹಾಗೂ ನಿವಾರಿಸಲು ಕ್ರಮ ತೆಗೆದುಕೊಳ್ಳುವಂತೆ ಸಂದರ್ಶಕರ ಸಮಯದಲ್ಲಿ ಯಾವುದೇ ತುರ್ತು ಸಭೆಯ ಸಂದರ್ಭ ಒದಗಿದಲ್ಲಿ, ತಮ್ಮ ಕಛೇರಿಯ ಅಧಿಕೃತ ವ್ಯಕ್ತಿ ಸಂದರ್ಶಕರೊಂದಿಗೆ ಸಂವಹನ ನಡೆಸಿ, ನಂತರ ಮೇಲಾಧಿಕಾರಿಗಳ ಗಮನಕ್ಕೆ ತರುವುದು. ಒಟ್ಟಾರೆ, ಸಾರ್ವಜನಿಕರ ಅಹವಾಲುಗಳನ್ನು ಸ್ಥಳೀಯವಾಗಿ ಹಾಗೂ ತುರ್ತಾಗಿ ನಿವಾರಿಸುವುದು ಈ ಸುತ್ತೋಲೆಯ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.