ಬೆಂಗಳೂರು : ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ ಹೊಂದಿದ್ದು, ವಿಜಯ್ ರೂಪಾನಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ಅಹಮದಾಬಾದ್ನಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಬಲಿಯಾದವರಲ್ಲಿ ಒಬ್ಬರಾದ ವಿಜಯ್ ರೂಪಾನಿ ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು ಮತ್ತು ಈ ಹಿಂದೆ ರಾಜ್ಯಸಭಾ ಸಂಸದರಾಗಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದರು. ನಾನು ಕೆಲವು ಸಂದರ್ಭಗಳಲ್ಲಿ ಅವರ ಜೊತೆ ಮಾತನಾಡಿದ್ದೇನೆ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.
Paying respects to Shri Vijay Rupani, who was among the victims of the tragic air crash in Ahmedabad.
He had served as Gujarat’s Chief Minister and earlier made notable contributions as a Rajya Sabha MP.
We had interacted on a few occasions while serving as Chief Ministers of… pic.twitter.com/MwXbWwT2ka
— Siddaramaiah (@siddaramaiah) June 13, 2025