ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ದ್ವೇಷ ಪ್ರಚಾರ ತಪ್ಪು ಮಾಹಿತಿ ತಡೆಗೆ ಎಐ ನಿಗಾ ಇಡಲು ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.
ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುವ ಸುಳ್ಳು ಸುದ್ದಿ, ತಪ್ಪು ಮಾಹಿತಿ ಮತ್ತು ದ್ವೇಷ ಪೂರಿತ ಪೋಸ್ಟ್ಗಳನ್ನು ಪತ್ತೆ ಮಾಡಲು ಅನುಕೂಲವಾಗುವಂತೆ ₹67.26 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ತಂತ್ರಾಂಶ ಖರೀದಿಸಲು ತೀರ್ಮಾನಿಸಲಾಗಿದೆ.
ಹೀಗಿದೆ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು
ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುವ ಸುಳ್ಳು ಸುದ್ದಿ, ತಪ್ಪು ಮಾಹಿತಿ ಮತ್ತು ದ್ವೇಷ ಪೂರಿತ ಪೋಸ್ಟ್ಗಳನ್ನು ಪತ್ತೆ ಮಾಡಲು ಅನುಕೂಲವಾಗುವಂತೆ ₹67.26 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ತಂತ್ರಾಂಶ ಖರೀದಿಸಲು ತೀರ್ಮಾನ
2025- 26ನೇ ಸಾಲಿನಲ್ಲಿ ಶುಚಿ ಕಾರ್ಯಕ್ರಮದಡಿ ಸ್ಯಾನಿಟರಿ ನ್ಯಾಪ್ತಿನ್ ಪ್ಯಾಡ್ಗಳು ಹಾಗೂ ಮುಟ್ಟಿನ ಕಪ್ಗಳನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ, ಅನುದಾನಿತ ಶಾಲೆಗಳು, ಕಾಲೇಜುಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿನ ಹೆಣ್ಣು ಮಕ್ಕಳಿಗೆ ವಿತರಿಸಲು ಹೊರಡಿಸಿರುವ ಆದೇಶಗಳಿಗೆ ಘಟನೋತ್ತರ ಅನುಮೋದನೆ.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ‘ಸಾರಥಿ’ ಯೋಜನೆಯಡಿ ಆಟೋ ರಿಕ್ಷಾ ಮತ್ತು ಕಾರುಗಳನ್ನು ಖರೀದಿಸಲು ₹19.18 ಕೋಟಿ ಸಹಾಯಧನ ಹಾಗೂ ಇ – ವೆಂಡಿಂಗ್ಯೋಜನೆಯಡಿ ಇ – ವೆಂಡಿಂಗ್ ವಾಹನಗಳನ್ನು ಖರೀದಿಸಲು ₹42.84 ಕೋಟಿ ಸಹಾಯಧನವನ್ನು ಅರ್ಹ ಫಲಾನುಭವಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ಒದಗಿಸುವ ಯೋಜನೆಗೆ ಒಪ್ಪಿಗೆ.
ಕರ್ನಾಟಕ ಪೊಲೀಸ್ ಮಸೂದೆಗೆ ತಿದ್ದುಪಡಿ ತರಲು ನಿರ್ಧಾರ.
ರಾಜ್ಯದಲ್ಲಿ ಒತ್ತುವರಿಯಾಗಿರುವ 328 ದೇವಾಲಯಗಳ ಆಸ್ತಿಗಳನ್ನು ಸಂರಕ್ಷಿಸಲು ಒತ್ತುವರಿ ತೆರವುಗೊಳಿಸಿ ಭೂ ವರಾಹ ಯೋಜನೆಯಡಿ ಈ ದೇವಾಲಯಗಳ ಸ್ಥಿರಾಸ್ತಿಗಳನ್ನು ದಾಖಲೀಕರಣಗೊಳಿಸುವ ₹15 ಕೋಟಿ ಯೋಜನೆಗೆ ಒಪ್ಪಿಗೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ ₹37.80 ಕೋಟಿ ವೆಚ್ಚದಲ್ಲಿ ಕಂಪ್ಯೂಟರ್ ಲ್ಯಾಬ್ಗಳನ್ನು ಸ್ಥಾಪಿಸಲು ಅನುಮೋದನೆ.
ಬೆಂಗಳೂರಿನ ನೀರು ಸರಬರಾಜು ಮತ್ತು ಒಳಚರಂಡಿ ಮ೦ಡಳಿ ವತಿಯಿ೦ದ ಕೆಪಿಸಿಎಲ್ನ ಯಲಹಂಕ ಕಂಬೈನ್ಸ್ ಸೈಕಲ್ ಪವರ್ ಪ್ಲಾಂಟ್ಗೆ ತೃತೀಯ ಸಂಸ್ಕರಿಸಿದ ನೀರನ್ನು ಪೂರೈಸಲು ಜಕ್ಕೂರಿನಲ್ಲಿರುವ 15 ಎಂಎಲ್ಡಿ ತೃತೀಯ ಸ೦ಸ್ಕರಿಸಿದ ಘಟಕದ 5 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ₹39.10 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ.
ಚಿಕ್ಕಬಳ್ಳಾಪುರ, ಕೆಜಿಎಫ್ ಮತ್ತು ವಿಜಯಪುರ ಎಪಿಎಂಸಿಗಳಲ್ಲಿ ₹60 ಕೋಟಿ ವೆಚ್ಚದಲ್ಲಿ ನಬಾರ್ಡ್ ಅನುದಾನದೊ೦ದಿಗೆ ಮೂಲಸೌಕರ್ಯ ಕೈಗೊಳ್ಳಲು ಅನುಮೋದನೆ.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಮಾನವ – ವನ್ಯಜೀವಿ ಸಂಘರ್ಷ ತಡೆಗಟ್ಟಲು ₹11.65 ಕೋಟಿ ವೆಚ್ಚದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಅನುಮೋದನೆ.
ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ನೂತನ ಸೌಪರ್ಣಿಕಾ ಅತಿಥಿಗೃಹ ನಿರ್ಮಾಣ ಕಾಮಗಾರಿಯನ್ನು ₹16 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ.
ಕೆಕೆಆರ್ಡಿಬಿ ಯೋಜನೆಯಡಿ ಕಲಬುರಗಿ ವೃತ್ತದ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ವಿಭಾಗ, ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ ಹಾಗೂ ಬಳ್ಳಾರಿ ವೃತ್ತದ ಕೊಪ್ಪಳ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ವಿಭಾಗಗಳ ₹100 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ #CabinetDecisions pic.twitter.com/dj5fulum08
— DIPR Karnataka (@KarnatakaVarthe) February 6, 2026








