ಬೆಂಗಳೂರು : ದೀಪಾವಳಿ ಹಬ್ಬದ ಅಂಗವಾಗಿ ನಾಡಿನದ್ಯಂತ ಜನರು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ ಇದರ ಮಧ್ಯ ಬೆಂಗಳೂರಿನಲ್ಲಿ ಅತಿ ಹೆಚ್ಚು ಪಟಾಕಿ ಸಿಡಿಸಿದ ಪರಿಣಾಮವಾಗಿ ಸದ್ಯ ಒಂದೇ ದಿನಕ್ಕೆ ಗಾಳಿಯ ಗುಣಮಟ್ಟ ಸಂಪೂರ್ಣವಾಗಿ ಕುಸಿದಿದೆ ಎಂದು ತಿಳಿದುಬಂದಿದೆ.
ದೀಪಾವಳಿಗೆ ಪಟಾಕಿ ಸಿಡಿಸುವ ಕುರಿತು ಹಲವು ನಿಯಮಗಳು ಇದ್ದರೂ ಸಹ ಜನರು ನಿಯಮಗಳನ್ನು ಗಾಳಿಗೆ ತೂರಿ ಪಟಾಕಿ ಸಿಡಿಸಿದ ಪರಿಣಾಮ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ ಕುಸಿತಕಂಡಿದೆ. ಹೌದು ಒಂದೇ ದಿನದಲ್ಲಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ 100ರ ಗಡಿದಾಟಿದೆ.
ದೀಪಾವಳಿ ಹಬ್ಬಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಸಿರು ಪಟಾಕಿ ಮಾರುವುದಕ್ಕೆ ಮಾತ್ರ ಅನುಮತಿ ನೀಡಿತ್ತು. ಇನ್ನು ಸರ್ಕಾರವೂ ಸಹ ಹಸಿರು ಪಟಾಕಿ ಮಾಡಬೇಕು. ಅಲ್ಲದೇ ಇದೇ ಸಮಯದಲ್ಲಿ ಪಟಾಕಿ ಸಿಡಿಸಬೇಕೆಂದು ಸಮಯ ನಿಗದಿ ಮಾಡಿತ್ತು. ಆದ್ರೆ, ಜನ ಕೇಳಬೇಕಲ್ಲ. ವರ್ಷಕ್ಕೆ ಒಂದೇ ದಿನ ಬರುವ ದೊಡ್ಡ ಹಬ್ಬ ದೀಪಾವಳಿ. ಅಂಗಡಿ ಮುಂಗಟ್ಟು ಪೂಜೆ ಮಾಡಿ ಭರ್ಜರಿ ಪಟಾಕಿ ಸಿಡಿಸಿ ಎಂಜಾಯ್ ಮಾಡಿದ್ದಾರೆ. ಹೀಗಾಗಿ ಮಾಲಿನ್ಯ ಹೆಚ್ಚಳವಾಗಿದೆ.