ಬೆಳಗಾವಿ : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ MES ಪುಂಡರು ಅಲ್ಲೇ ನಡೆಸಿದ್ದನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕರೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಈಗಾಗಲೇ ಬೆಳಗ್ಗೆ 6 ಗಂಟೆಯಿಂದಲೇ ಪ್ರತಿಭಟನೆ ನಡೆಯುತ್ತಿದೆ.
ಆದರೆ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ಸಿಕ್ಕಿದ್ದು, ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಿ ಗೆಯಾವುದೇ ರೀತಿಯಾಗಿ ಬಂದ್ ಬಿಸಿ ತಟ್ಟಿಲ್ಲ. ಬೆಳಗಾವಿ ಕಲಬುರ್ಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎಂದಿನಂತೆ ವಾಹನಗಳು ಸಂಚಾರ ಆರಂಭಿಸಿದ್ದು ಅಂಗಡಿ ಮುಗ್ಗಟ್ಟುಗಳು ಸಹ ಓಪನ್ ಆಗಿವೆ.
ಇನ್ನು ಚಿಕ್ಕಮಂಗಳೂರು ಮತ್ತು ಕೊಪ್ಪಳದಲ್ಲಿ ಕನ್ನಡ ಸೇನೆ ಸೇರಿದಂತಹ ವಿವಿಧ ಸಂಘಟನೆಗಳು ಬಸ್ ನಿಲ್ದಾಣ ಬಳಿ ಅಂಗಡಿ ಮುಗ್ಗಟ್ಟುಗಳನ್ನು ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸುತ್ತಿದ್ದಾರೆ. ಮೌನವಾಗಿ ಪ್ರತಿಭಟನೆ ಮಾಡುವುದಕ್ಕೆ ಅವಕಾಶವಿದ್ದು ಆದರೆ ಪ್ರತಿಭಟನಾಕಾರರು ಒತ್ತಾಯಪೂರ್ವಕವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು.