ಬೆಂಗಳೂರು : ಕೋಲ್ಕತ್ತಾದಲ್ಲಿ ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳು ಇಂದು ಹೊರರೋಗಿ ಸೇವೆ ವಿಭಾಗ (ಒಪಿಡಿ) ಬಂದ್ ಘೋಷಿಸಿವೆ.
ಕೋಲ್ಕತ್ತಾದಲ್ಲಿ ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳು ಶನಿವಾರ ಹೊರರೋಗಿ ಸೇವೆ ವಿಭಾಗ (ಒಪಿಡಿ) ಬಂದ್ ಘೋಷಿಸಿವೆ. ಆದರೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದ ವೈದ್ಯರು ಮತ್ತು ನರ್ಸ್ಗಳ ಸುರಕ್ಷತೆಗೆ ಎಲ್ಲಾ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ಮುಂದಿನ ವಾರ ವೈದ್ಯಕೀಯ ಸಂಘಟನೆಗಳು ಮತ್ತು ಆಸ್ಪತ್ರೆಗಳ ಮಾಲೀಕರ ಜೊತೆಗೆ ಸಭೆ ನಡೆಸಲಾಗುತ್ತದೆ.
ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಖಾಸಗಿ ಆಸ್ಪತ್ರೆಯ ವೈದ್ಯರು ರಾಷ್ಟ್ರವ್ಯಾಪಿ ಸೇವೆಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. 24 ಗಂಟೆಗಳ ಕಾಲ. ಎಲ್ಲಾ ಅಗತ್ಯ ಸೇವೆಗಳನ್ನು ನಿರ್ವಹಿಸಲಾಗುವುದು. ವಾಡಿಕೆಯ ಒಪಿಡಿಗಳು ಕಾರ್ಯನಿರ್ವಹಿಸುವುದಿಲ್ಲ ಮತ್ತು ಆಯ್ಕೆಯ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುವುದಿಲ್ಲ. ಆಧುನಿಕ ವೈದ್ಯಕೀಯ ವೈದ್ಯರು ಸೇವೆ ಒದಗಿಸುತ್ತಿರುವ ಎಲ್ಲಾ ವಲಯಗಳಲ್ಲಿ ಹಿಂತೆಗೆದುಕೊಳ್ಳಲಾಗಿದೆ. ಐಎಂಎಗೆ ತನ್ನ ವೈದ್ಯರ ನ್ಯಾಯಯುತ ಕಾರಣಕ್ಕಾಗಿ ರಾಷ್ಟ್ರದ ಸಹಾನುಭೂತಿ ಬೇಕು ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ತಿಳಿಸಿದೆ.
ಯಾವ ಸೇವೆ ಇರಲಿದೆ
ಇಂದು ತುರ್ತು ಸೇವೆ, ಔಷಧಿ ಅಂಗಡಿ, ಒಳ ರೊಗಿಗಳ ಸೇವೆ, ಹರಿಗೆ ಮತ್ತು ತುರ್ತು ಶಸ್ತ್ರಚಿಕಿತ್ಸೆ, ಎಮರ್ಜೆನ್ಸಿ ಸೇವೆಗಳು ಮಾತ್ರ ಲಭ್ಯ ವಿರಲಿದೆ.
ಯಾವ ಸೇವೆ ಇರಲ್ಲ?
ಇಂದು ಕ್ಲಿನಿಕ್ ಸೇವೆ, ಮಕ್ಕಳ ಒಪಿಡಿ, ದಂತ ಚಿಕಿತ್ಸೆ, ತುರ್ತು ಅಲ್ಲದ ಶಸ್ತ್ರ ಚಿಕಿತ್ಸೆ, ಡಯಾಲಿಸಿಸ್, ಜ್ವರ, ತಲೆನೋವು, ಕೆಮ್ಮಿನಂತರ ಸಾಮಾನ್ಯ ಕಾಯಿಲೆಗೆ ಒಪಿಡಿ ಸೇವೆ ಇರುವುದಿಲ್ಲ.