ಬೆಂಗಳೂರು : ಸಾರ್ವಜನಿಕರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ A & A ಚಿಟ್ ಫಂಡ್ ಫೈನಾನ್ಸ್ ಸಂಸ್ಥೆಯ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಕೇರಳ ಮೂಲದ ಎವಿ ಟೋಮಿ, ಶನಿ ಟೋಮಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. 2005 ರಿಂದ ಚಿಟ್ ಫಂಡ್ ಮತ್ತು ಫೈನಾನ್ಸ್ ಕಂಪನಿ ನಡೆಸುತ್ತಿದ್ದರು. ಸಾರ್ವಜನಿಕರಿಂದ ಅಡ್ಡ ಚೀಟಿ ರೂಪದಲ್ಲಿ ಹಣ ಪಡೆದಿದ್ದರು. ಆದರೆ ಇದ್ದಕ್ಕಿದ್ದಂತೆ ಆರೋಪಿಗಳು ಕಚೇರಿಗೆ ಬೀಗ ಹಾಕಿ ಪರಾರಿಯಾಗಿದ್ದಾರೆ. ಹೀಗಾಗಿ ವಂಚನೆ ಮಾಡಿದ್ದಾರೆ ಎಂದು ಹಣ ಹೂಡಿಕೆ ಮಾಡಿದವರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ಕೊಂಡ ಪೊಲೀಸರು ಇದೀಗ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.