Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬ್ಯಾಂಕ್ ಖಾತೆ ಬದಲಾಗಿದೆಯೇ? ಕೇವಲ 2 ನಿಮಿಷದಲ್ಲಿ ನಿಮ್ಮ EPFO ಬ್ಯಾಂಕ್ ವಿವರ ಅಪ್‌ಡೇಟ್ ಮಾಡಿ; ಇಲ್ಲಿದೆ ಸಿಂಪಲ್ ಸ್ಟೆಪ್ಸ್!

17/02/2026 1:21 PM

ಲಾಲೂ ಪ್ರಸಾದ್ ಯಾದವ್ ಜಾಮೀನು ಪ್ರಶ್ನಿಸಿ CBI ಅರ್ಜಿ: ವಿಚಾರಣೆ ಏ. 22ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್!

17/02/2026 1:14 PM

Shocking: ಸಪ್ತಪದಿ ತುಳಿದ ಮೇಲೆ ಸಿಕ್ಕಿತು ಶಾಕ್! ವರ ‘ತೃತೀಯ ಲಿಂಗಿ’ ಎಂದು ಗೊತ್ತಾದ ಕ್ಷಣವೇ ಮದುವೆ ಮಂಟಪದಲ್ಲಿ ಹೈಡ್ರಾಮಾ !

17/02/2026 12:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿ : ಕೇಂದ್ರ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ
KARNATAKA

BIG NEWS : ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿ : ಕೇಂದ್ರ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

By kannadanewsnow5728/11/2024 6:00 AM

ನವದೆಹಲಿ : ಕಳಸಾ ಬಂಡೂರಿ ನಾಲೆ ಯೋಜನೆ ವಿಚಾರದಲ್ಲಿ ಕೇಂದ್ರ ಸಚಿವರು ಮಧ್ಯಪ್ರವೇಶ ಮಾಡಿ ಅಗತ್ಯವಿರುವ ಅರಣ್ಯ ಹಾಗೂ ವನ್ಯಜೀವಿ ಮಂಡಳಿ ಅನುಮತಿ ಕೊಡಿಸಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರಿಗೆ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಬುಧವಾರ ಭೇಟಿ ಮಾಡಿದ ಜಲ ಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಈ ಬಗ್ಗೆ ಮನವಿ ಪತ್ರ ಸಲ್ಲಿಸಿದರು. ಪತ್ರದ ಸಾರಾಂಶ ಹೀಗಿದೆ;

ದಿನಾಂಕ 09-10-2024ರಂದು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯು ತನ್ನ 80ನೇ ಸಭೆಯಲ್ಲಿ ಕರ್ನಾಟಕದ ಅರ್ಜಿ ವಿಚಾರಣೆಯನ್ನು ಮುಂದೂಡಿ ಈ ವಿಚಾರವಾಗಿ ಇರುವ ಕಾನೂನು ಸಮಸ್ಯೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ರಾಜ್ಯವು ದಿನಾಂಕ 10-10-2024 ಹಾಗೂ 16-10-2024 ದಿನಾಂಕದಂದು ಅಗತ್ಯ ಸ್ಪಷ್ಟನೆಯನ್ನು ಪತ್ರದ ಮೂಲಕ ಸಲ್ಲಿಕೆ ಮಾಡಲಾಗಿದೆ.

ಕಳಸಾ ನಾಲೆ ಯೋಜನೆಗೆ ಕಾಳಿ ಹಾಗೂ ಸಹ್ಯಾದ್ರಿ ಹುಲಿ ಸಂರಕ್ಷಣಾ ಪ್ರದೇಶದಲ್ಲಿ 10.6852 ಹೆಕ್ಟೇರ್ ಅರಣ್ಯ ಭೂಮಿ ಅಗತ್ಯವಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಸುತ್ತಲಿನ ಹಳ್ಳಿಗಳ ಪ್ರದೇಶವನ್ನು ಇದು ಹೊಂದಿದೆ. ಇದರಲ್ಲಿ ಜಾಕ್ ವೆಲ್ ಸಹಿತ ಪಂಪ್ ಹೌಸ್, ವಿದ್ಯುತ್ ಉಪಕೇಂದ್ರಗಳನ್ನು ನಿರ್ಮಾಣ ಮಾಡಲಾಗುವುದು.

ಸ್ಥಾಯಿ ಸಮಿತಿಯ 80ನೇ ಸಭೆ ಚರ್ಚೆಯಾದ ಅಂಶಗಳು:

ಗೋವಾದ ವನ್ಯಜೀವಿ ಮಂಡಳಿ ಮುಖ್ಯಸ್ಥರು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಸೆಕ್ಷನ್ 29 ಅನ್ನು ಪ್ರಸ್ತಾಪಿಸಿ ಈ ಯೋಜನೆ ಕಾಮಗಾರಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಕರ್ನಾಟಕ ರಾಜ್ಯವು ಸುಪ್ರೀಂ ಕೋರ್ಟ್ ಮುಂದೆ ಸೂಕ್ತ ದಾಖಲೆಗಳನ್ನು ಮಂಡಿಸಿದೆ.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ತಜ್ಞರ ಸಮಿತಿ ರಚಿಸಿತ್ತು. ಈ ತಂಡ ಯೋಜನೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ತನ್ನ ವರದಿ ಸಲ್ಲಿಸಿದೆ. ಈ ವರದಿಯಲ್ಲಿ ಪ್ರಾಧಿಕಾರವು ಮಹದಾಯಿ ನೀರು ವಿವಾದ ನ್ಯಾಯಾಧೀಕರಣ ತೀರ್ಪಿನ ಬಗ್ಗೆ ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವಣ ಕಾನೂನು ಸಮರ ಸುಪ್ರೀಂ ಕೋರ್ಟ್ ನಲ್ಲಿದೆ ಎಂದು ತಿಳಿಸಿತ್ತು.

ಈ ಎಲ್ಲಾ ವಿಚಾರವಾಗಿ ಕರ್ನಾಟಕ ಸರ್ಕಾರದ ಅರಣ್ಯ ಮತ್ತು ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಸ್ಪಷ್ಟನೆ ನೀಡಿದ್ದು, ಸುಪ್ರೀಂ ಕೋರ್ಟ್ ಈ ಯೋಜನೆ ಜಾರಿ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಇದರ ಜತೆಗೆ ಕಾನೂನು ಪ್ರಕಾರವಾಗಿ ಕೇಂದ್ರ ಸರ್ಕಾರದ ಎಲ್ಲಾ ಅನುಮತಿಗಳು ಸಿಕ್ಕ ನಂತರವಷ್ಟೇ ಈ ಯೋಜನೆ ಕಾಮಗಾರಿ ಕೈಗೊಳ್ಳಲು ನಿರ್ಧರಿಸಿದೆ ಎಂದು ತಿಳಿಸಿದರು.

ಈ ಯೋಜನೆಯು ಅಭಯಾರಣ್ಯದ ಭಾಗವಲ್ಲದಿದ್ದರೂ ಹುಲಿ ಕಾರಿಡಾರ್ ಪ್ರದೇಶ ವ್ಯಾಪ್ತಿಯಲ್ಲಿ ಬರುತ್ತದೆ. ಈ ಯೋಜನೆಯಲ್ಲಿ ನಿರ್ಮಿಸಲಾಗುವ ಜಲ ಮೂಲಗಳು ವನ್ಯಜೀವಿಗೆ ಅಗತ್ಯ ನೀರು ಪೂರೈಸಲಿದೆ. ಹೀಗಾಗಿ ಈ ಯೋಜನೆಗೆ ಅನುಮತಿ ನೀಡಬೇಕು ಎಂದು ಕರ್ನಾಟಕದ ವನ್ಯಜೀವಿ ಸಂರಕ್ಷಣಾ ಮಂಡಳಿಯು ಸ್ಥಾಯಿ ಸಮಿತಿಗೆ ಮಾಹಿತಿ ನೀಡಿತು.

ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ ಬಳಿಕ ಸ್ಥಾಯಿ ಸಮಿತಿಯು ಕಾನೂನು ವಿಚಾರಗಳ ಬಗ್ಗೆ ಸ್ಪಷ್ಟನೆ ಕೋರಿತ್ತು. ಜತೆಗೆ ಪ್ರಾಧಿಕಾರದ ಅಭಿಪ್ರಾಯ ಸಲ್ಲಿಕೆಗೆ ಸೂಚಿಸಿತ್ತು. ಸ್ಥಾಯಿ ಸಮಿತಿಯ ಈ ಎಲ್ಲಾ ಮಾರ್ಗದರ್ಶನವನ್ನು ಕರ್ನಾಟಕ ರಾಜ್ಯ ಪಾಲಿಸಿದೆ. ಆದರೂ ಈ ಯೋಜನೆಗೆ ಅನುಮತಿ ನೀಡುವುದು ವಿಳಂಬವಾಗುತ್ತಿದೆ.

ಹೀಗಾಗಿ, ಕೇಂದ್ರ ಅರಣ್ಯ ಸಚಿವರಾದ ತಾವು ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಕರ್ನಾಟಕದ ಲಿಖಿತ ಮನವಿ ಬಗ್ಗೆ ಪ್ರಾಧಿಕಾರದ ಅಭಿಪ್ರಾಯವನ್ನು ಪರಿಶೀಲಿಸಿ ಆದಷ್ಟು ಬೇಗ ಯೋಜನೆಗೆ ಅನುಮತಿ ನೀಡಬೇಕು. ಕಳಸಾ ಯೋಜನೆಗೆ ಅಗತ್ಯವಿರುವ ಅನುಮತಿ ನೀಡಲು ರಿಜನಲ್ ಎಂಪವರ್ ಕಮಿಟಿ, ಇಂಟರ್ ಗ್ರೇಟೆಡ್ ರೀಜನಲ್ ಆಫೀಸ್, ಪರಿಸರ  ಮತ್ತು ಅರಣ್ಯ ಇಲಾಖೆಯು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಲಾಗಿದೆ.

ಕರ್ನಾಟಕ ರಾಜ್ಯವು ಕಳಸಾ ನಾಲೆ ಯೋಜನೆಗೆ ಅಗತ್ಯವಿರುವ ಅರಣ್ಯ ಪ್ರದೇಶ ಭೂಮಿಯ ಪ್ರಮಾಣವನ್ನು 258 ಹೆಕ್ಟೇರ್ ಪ್ರದೇಶದಿಂದ ಕೇವಲ 26.92ಹೆಕ್ಟೇರ್ ಪ್ರದೇಶಕ್ಕೆ ಇಳಿಸಿದೆ. ಬಂಡೂರಿ ನಾಲೆ ಯೋಜನೆಗೆ ಅಗತ್ಯವಿರುವ ಅರಣ್ಯ ಪ್ರದೇಶ ಭೂಮಿಯನ್ನು 243 ಹೆಕ್ಟೇರ್ ನಿಂದ ಕೇವಲ 28.44 ಹೆಕ್ಟೇರ್ ಪ್ರದೇಶಗಳಿಗೆ ಇಳಿಸಿದೆ. ಆಮೂಲಕ ಪರಿಸರ ಸಂರಕ್ಷಣೆಯಲ್ಲಿ ರಾಜ್ಯ ತನ್ನ ಬದ್ಧತೆ ಪ್ರದರ್ಶಿಸಿದೆ. ರಾಜ್ಯದ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರವು ವಿಳಂಬ ಮಾಡದೇ ಈ ಯೋಜನೆಗೆ ಅನುಮತಿ ನೀಡಬೇಕು” ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

BIG NEWS : ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿ : ಕೇಂದ್ರ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ BIG NEWS: Allow Kalasa Banduri project: Deputy CM DK Shivakumar to Union Minister Shivakumar's appeal
Share. Facebook Twitter LinkedIn WhatsApp Email

Related Posts

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್ : ಸ್ವತ್ತುಗಳ ಹರಾಜಿನ ಮೂಲಕ ವಸೂಲಾತಿಗೆ ಕ್ರಮ !

17/02/2026 12:39 PM2 Mins Read

SHOCKING : ಮದುವೆಯಾಗುವುದಾಗಿ ಮಹಿಳೆಯಿಂದ ವಂಚನೆ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ !

17/02/2026 12:15 PM1 Min Read

BIG NEWS : 10ನೇ ತರಗತಿಯ ಮೊದಲ ಪರೀಕ್ಷೆ ತಪ್ಪಿಸಿಕೊಂಡರೆ 2ನೇ ಬೋರ್ಡ್ ಎಕ್ಸಾಂಗೆ ಅನರ್ಹ : `CBSE’ ಹೊಸ ರೂಲ್ಸ್ !

17/02/2026 12:04 PM2 Mins Read
Recent News

ಬ್ಯಾಂಕ್ ಖಾತೆ ಬದಲಾಗಿದೆಯೇ? ಕೇವಲ 2 ನಿಮಿಷದಲ್ಲಿ ನಿಮ್ಮ EPFO ಬ್ಯಾಂಕ್ ವಿವರ ಅಪ್‌ಡೇಟ್ ಮಾಡಿ; ಇಲ್ಲಿದೆ ಸಿಂಪಲ್ ಸ್ಟೆಪ್ಸ್!

17/02/2026 1:21 PM

ಲಾಲೂ ಪ್ರಸಾದ್ ಯಾದವ್ ಜಾಮೀನು ಪ್ರಶ್ನಿಸಿ CBI ಅರ್ಜಿ: ವಿಚಾರಣೆ ಏ. 22ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್!

17/02/2026 1:14 PM

Shocking: ಸಪ್ತಪದಿ ತುಳಿದ ಮೇಲೆ ಸಿಕ್ಕಿತು ಶಾಕ್! ವರ ‘ತೃತೀಯ ಲಿಂಗಿ’ ಎಂದು ಗೊತ್ತಾದ ಕ್ಷಣವೇ ಮದುವೆ ಮಂಟಪದಲ್ಲಿ ಹೈಡ್ರಾಮಾ !

17/02/2026 12:49 PM

ಅಜಿತ್ ಪವಾರ್ ವಿಮಾನ ಅಪಘಾತ : ಲಿಯರ್ ಜೆಟ್ ರೆಕಾರ್ಡರ್ ಗಳ ಪರಿಶೀಲನೆ, CVR ರಿಕವರಿಗಾಗಿ ವಿದೇಶಿ ಕಂಪನಿಯ ಮೊರೆ

17/02/2026 12:39 PM
State News
KARNATAKA

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್ : ಸ್ವತ್ತುಗಳ ಹರಾಜಿನ ಮೂಲಕ ವಸೂಲಾತಿಗೆ ಕ್ರಮ !

By kannadanewsnow5717/02/2026 12:39 PM KARNATAKA 2 Mins Read

ಬೆಂಗಳೂರು ಪೂರ್ವನಗರ ಪಾಲಿಕೆ ಕೆ.ಆರ್.ಪುರ ವಲಯ ವ್ಯಾಪ್ತಿಯಲ್ಲಿ ನಗರ ಪಾಲಿಕೆಗೆ ಒಂದಕ್ಕಿಂತಲೂ ಹೆಚ್ಚಿನ ವರ್ಷಗಳ ಆಸ್ತಿ ತೆರಿಗೆ ಪಾವತಿಸದೇ ಬಾಕಿ…

SHOCKING : ಮದುವೆಯಾಗುವುದಾಗಿ ಮಹಿಳೆಯಿಂದ ವಂಚನೆ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ !

17/02/2026 12:15 PM

BIG NEWS : 10ನೇ ತರಗತಿಯ ಮೊದಲ ಪರೀಕ್ಷೆ ತಪ್ಪಿಸಿಕೊಂಡರೆ 2ನೇ ಬೋರ್ಡ್ ಎಕ್ಸಾಂಗೆ ಅನರ್ಹ : `CBSE’ ಹೊಸ ರೂಲ್ಸ್ !

17/02/2026 12:04 PM

BIG NEWS : ಪೊಲೀಸರು `ಪೋಕ್ಸೋ ಕೇಸ್’ ಗಳಲ್ಲಿ ಸಂತ್ರಸ್ತರ ಹೆಸರು, ವಿಳಾಸಗಳ ಗೌಪತ್ಯೆ ಕಾಪಾಡುವುದು ಕಡ್ಡಾಯ !

17/02/2026 11:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.