ಹಾವೇರಿ : ಕರ್ತವ್ಯಲೋಪ ಹಿನ್ನಲೆಯಲ್ಲಿ ಇಬ್ಬರೂ ಪಿಡಿಒ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹಾವೇರಿ ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಾಲ್ ಅವರು ಈ ಆದೇಶ ಹೊರಡಿಸಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆ ತಲುಪಿಸಲು ನಿರ್ಲಕ್ಷ ವಹಿಸಿದ ಹಿನ್ನೆಲೆಯಲ್ಲಿ ಇಬ್ಬರು ಪಿಡಿಒ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ.
ಪಿಡಿಒ ಅಧಿಕಾರಿಗಳಾದ ಶಾಂತಿನಾಥ ಜೈನ ಹಾಗೂ ಮಾಬುಸಾಬ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಕವಲೆತ್ತು ಗ್ರಾಮ ಪಂಚಾಯಿತಿ ಪಿಡಿಓ ಆಗಿದ್ದ ಶಾಂತಿನಾಥ ಜೈನ್ ಹಾಗೂ ಹಾವೇರಿ ತಾಲೂಕಿನ ಯರಗಚ್ಚ ಗ್ರಾಮ ಪಂಚಾಯಿತಿ ಪಿಡಿಒ ಮಾಬುಸಾಬ್ ಅಮಾನತುಗೊಂಡವರು. ಕಳೆದ ನಾಲ್ಕು ವರ್ಷಗಳಿಂದ ಅಭಿವೃದ್ಧಿ ಮತ್ತು ಕಾಮಗಾರಿಗಳು ಮತ್ತು ಎನ್ ಆರ್ ಜಿ ಕಾಮಗಾರಿಯಲ್ಲಿ ಈ ಇಬ್ಬರು ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.