ನವದೆಹಲಿ : ಶೀಘ್ರದಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಈ ತಿಂಗಳಾಂತ್ಯಕ್ಕೆ ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಆಗುವ ಸಾಧ್ಯತೆ ಇದೆ. ಈ ಸಂಬಂಧ ಕೇಂದ್ರ ಸಚಿವ ಅಮಿತ್ ಷಾ ಮತ್ತು ಜೆಪಿ ನಡ್ದ ಸಭೆ ಕರೆದಿದ್ದಾರೆ ಎನ್ನಲಾಗಿದೆ.
ಇದೆ ವೇಳೆ 15 ರಾಜ್ಯಗಳ ಬಿಜೆಪಿ ಘಟಕಗಳ ಅಧ್ಯಕ್ಷರ ಆಯ್ಕೆ ಬಗ್ಗೆಯೂ ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಕರ್ನಾಟಕ, ಉತ್ತರಪ್ರದೇಶ, ಮಧ್ಯಪ್ರದೇಶ, ಗುಜರಾತ್ ಹಾಗು ಓಡಿಸ್ಸಾ ಸೇರಿದಂತೆ 15 ರಾಜ್ಯಗಳ ಬಿಜೆಪಿ ಅಧ್ಯಕ್ಷರ ಚುನಾವಣೆಯ ಬಗ್ಗೆ ಚರ್ಚೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.