ಧಾರವಾಡ-ಹುಬ್ಬಳ್ಳಿ : ಕೇಂದ್ರ ಸಚಿವ ಅಮಿತ್ ಶಾ ಅವರು ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತು ನೀಡಿರುವ ಹೇಳಿಕೆಗೆ ಇದೀಗ ತೀವ್ರ ಖಂಡನೆ ವ್ಯಕ್ತವಾಗಿದ್ದು. ಈ ಹಿನ್ನೆಲೆ ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ದಲಿತ ಸಂಘಟನೆಗಳು ಕರೆ ನೀಡಿವೆ. ಇದಕ್ಕೆ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಕೂಡ ಬೆಂಬಲ ಘೋಷಣೆ ಮಾಡಿದ್ದು, ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದರಿಂದ ಇದೀಗ ಈ ಒಂದು ಬಂದ್ ಕರೆ ರಾಜಕೀಯ ತಿರುವು ಪಡೆದುಕೊಂಡಿದೆ.
ಹೌದು ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ದಲಿತ ಸಂಘಟನೆಗಳು ಕರೆಗೆ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಬೆಂಬಲ ಘೋಷಣೆ ಮಾಡಿದ್ದು, ಇತ್ತ ಹುಬ್ಬಳ್ಳಿ ಧಾರವಾಡ ನಗರ ಬಂದ್ ಗೆ ಬಿಜೆಪಿ ವಿರೋಧಿಸುತ್ತಿದೆ. ಹಾಗಾಗಿ ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಕರೆ ರಾಜಕೀಯ ತಿರುವು ಪಡೆದುಕೊಂಡಿದೆ ಎನ್ನಲಾಗಿದೆ.
ಹುಬ್ಬಳ್ಳಿ ಧಾರವಾಡ ಬಂದ್ ಮಾಡಿದರೆ ನಾವು ಬಂದ್ ಗೆ ಕರೆ ಕೊಡುತ್ತೇವೆ. ನಿಮಗೆ ಪ್ರತಿಯಾಗಿ ನಾವು ಕೂಡ ಬಂದ್ ಗೆ ಕರೆ ಕೊಡುತ್ತೇವೆ ಎಂದು ಅರವಿಂದ್ ಬೆಲ್ಲದ್ ಹೇಳಿದ್ದಾರೆ. ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಹೇಳಿಕೆಗೆ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಬೆಲ್ಲದ್ ಹೇಳಿಕೆಗೆ ವಿವಿಧ ದಲಿತ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಶಾಸಕ ಬೆಲ್ಲದ್ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.