ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ಇಂದು ದಲಿತ ಪರ ಸಂಘಟನೆಗಳು ಹುಬ್ಬಳ್ಳಿ-ಧಾರವಾಡ, ಬೀದರ್ ಬಂದ್ ಗೆ ಕರೆ ನೀಡಲಾಗಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ದಲಿತ ಪರ ಸಂಘಟನೆಗಳು ಹುಬ್ಬಳ್ಳಿ-ಧಾರವಾಡ, ಬೀದರ್ ತಾಲೂಕು ಬಂದ್ ಗೆ ಕರೆ ನೀಡಲಾಗಿದೆ ಮುನ್ನೆಚ್ಚರಿಕೆ ಕ್ರಮವಾಗಿ ಬೀದರ್ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಬೀದರ್ ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ರಜೆ ಘೋಷಿಸಿದ್ದಾರೆ.
ಇಂದು ಹುಬ್ಬಳ್ಳಿ -ಧಾರವಾಡ ಬಂದ್ ಗೆ ದಲಿತ ಸಂಘಟನೆಗಳು ಕರೆ ನೀಡಿದ್ದು, ಹುಬ್ಬಳ್ಳಿ, ಧಾರವಾಡದ ಕೆಲವು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.