ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಕಳೆದ 3-4 ತಿಂಗಳಿನಿಂದ ಸಂಬಳ ಬಾರದೇ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪರದಾಟ ನಡೆಸುತ್ತಿದ್ದಾರೆ.
ಹೌದು, ಕಳೆದ ಮೂರು ತಿಂಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರಿಗೆ ಗೌರವಧನ ನೀಡುತ್ತಿಲ್ಲ ಎಂದು ಅಂಗನವಾಡಿ ಸಿಬ್ಬಂದಿ ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನಮಗೆ ಪ್ರತಿ ತಿಂಗಳು ಸರಿಯಾಗಿ ಗೌರವಧನ ನೀಡುತ್ತಿಲ್ಲ. ಎರಡು, ಮೂರು ತಿಂಗಳಿಗೊಮ್ಮೆ ನೀಡುತ್ತಿದ್ದಾರೆ. ಕೇಳಿದರೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರಂತೆ.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿರಿಗೆ ಈ ವರ್ಷದ ಜೂನ್, ಜುಲೈ, ಆಗಸ್ಟ್ ತಿಂಗಳ ಸಂಬಳ ಬರಬೇಕಿದೆ. ಅದರ ಜೊತೆಗೆ ಅಂಗನವಾಡಿ ಬಾಡಿಗೆ ಕಟ್ಟಡದ ಬಾಡಿಗೆ, ಮಕ್ಕಳಿಗೆ ಮೊಟ್ಟೆ, ತರಕಾರಿ ಖರೀದಿಗೂ ಕೂಡ ಹಣ ಬಿಡುಗಡೆ ಆಗಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆಯರು ಅಳಲು ತೋಡಿಕೊಂಡಿದ್ದಾರೆ.