ಮಂಡ್ಯ : ಕಾರ್ಯಕ್ರಮ ಒಂದರಲ್ಲಿ ಕನ್ನಡ ಹಾಡು ಹಾಡಿ ಎಂದಿದ್ದಕ್ಕೆ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಹೋಲಿಸಿ ಕನ್ನಡಿಗರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಸೋನು ನಿಗಮ್ ವಿರುದ್ಧ ಈ ಹಿಂದೆ ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಇದೀಗ ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಡ್ಯದಲ್ಲಿ ಕೂಡ ಸೋನು ನಿಗಮ್ ವಿರುದ್ಧ ದೂರು ದಾಖಲಾಗಿದೆ.
ಹೌದು ಮಂಡ್ಯದಲ್ಲೂ ಇದೀಗ ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲಾಗಿದೆ. ಮಂಡ್ಯ ASP ಗೆ ಕನ್ನಡ ಸೇನೆ ಕಾರ್ಯಕರ್ತರು ದೂರು ನೀಡಿದ್ದಾರೆ. ಗಾಯಕ ಸೋನು ನಿಗಮ್ ಬಂಧಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.