ಗದಗ: ರಾಜ್ಯದಲ್ಲಿ ಇತ್ತೀಚೆಗಷ್ಟೇ ಪಿಎಸೈ ಪರೀಕ್ಷೆಯ ಅಕ್ರಮ ಹಗರಣ, ಪದವಿ ಕಾಲೇಜು ಹಗರಣದ ಸದ್ದು ಚಾಲ್ತಿಯಲ್ಲಿದೆ. ಈ ನಡುವೆ ಪಿಟಿಸಿಎಲ್ ನ ಕಿರಿಯ ಸಹಾಯಕ ಹುದ್ದೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆದ ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು, ಈ ನಡುವೆ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ. ಈ ನಡುವೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗದಗದಲ್ಲಿ, ಮುನ್ಸಿಪಲ್ ಕಾಲೇಜ್ ನಲ್ಲಿ ನಡೆದ ಪರೀಕ್ಷೆಯಲ್ಲಿ ತಂದೆ-ಮಗ ಸೇರಿಕೊಂಡು ಪಶ್ನೆಪತ್ರಿಕೆ ಸೋರಿಕೆಗೆ ಕಾರಣವಾಗಿದೆ ಎನ್ನಲಾಗಿದೆ.
ಪತ್ರಕರ್ತನಾಗಿ, ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಮಗ ಸಮೀತಕುಮಾರ್, ಆಗಮಿಸಿ, ತನ್ನ ತನ್ನ ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಸೆರೆ ಹಿಡಿದಿದ್ದಾನೆ ಎನ್ನಲಾಗಿದೆ. ಈಗ ಫೋಟೋ ತೆಗೆದು ರಾಜ್ಯದ ಬೇರೆ ಬೇರೆ ಪರೀಕ್ಷಾ ಕೇಂದ್ರಗಳಿಗೂ ಪ್ರಶ್ನೆ ಪತ್ರಿಕೆ ಕಳುಹಿಸಿದ್ದಾರೆ ಎನ್ನುವ ಆರೋಪ ಎನ್ನಲಾಗಿದೆ. ಈ ನಡುವೆ ಳಗಾವಿ ಸೈಬರ್ ಕ್ರೈಮ್ ಪೊಲೀಸ್ ಇನ್ಸ್ಪೆಕ್ಟರ್ ವೀರೇಶ್ ದೊಡಮನಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಸೈಬರ್ ಕ್ರೈಂ ನಡೆಸಿದ್ದಾರೆ.