ರಾಯಚೂರು : ನಿನ್ನೆಯಷ್ಟೇ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿತ್ತು. ಇದೀಗ ಈ ಒಂದು ಘಟನೆ ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭವಿಸಿದ್ದು ಲಾರಿ ಹಾಗೂ ಕಾರಿನ ಮಧ್ಯ ಭೀಕರ ಅಪಘಾತ ಸಂಭವಿಸಿ ಜೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಸಮೀಪ ಲಾರಿ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ವೆಂಕಟಾಚಲಪತಿ (48) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸ್ಥಳಕ್ಕೆ ಮಾನ್ವಿ ತಾಲೂಕು ಮಾನ್ವಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.