ಹಾವೇರಿ : ಇತ್ತೀಚಿಗೆ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ ಹಾಗೂ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಬ್ಯಾಡಗಿ ತಾಲೂಕಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬಳಕೆಗೆ ಬಂದಿದ್ದು ಹಿಂದೂ ಯುವಕ ಹಾಗು ಮುಸ್ಲಿಂ ಯುವತಿಯ ಮೇಲೆ ದುಷ್ಕರ್ಮಿಗಳು ಅಲ್ಲೇ ಮಾಡಿರುವ ಘಟನೆ ಜರುಗಿದೆ.
ಹಾವೇರಿಯಿಂದ ಬ್ಯಾಡಗಿಗೆ ತನ್ನ ಅಕ್ಕನ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಪಟ್ಟಣದ ಪುರಸಭೆ ಬಳಿ ಇರುವ ಈಶ್ವರ ದೇವಸ್ಥಾನ ಬಳಿ ಮುಸ್ಲಿಂ ಯುವತಿ ಒಬ್ಬಳು ಹಿಂದೂ ಹುಡುಗನ ಜತೆಗೆ ಮಾತನಾಡುತ್ತಿದ್ದಾಳೆ ಎಂದು ಆರೋಪಿಸಿ7 ಜನ ಮುಸ್ಲಿಂ ಹುಡುಗರು ಹಿಂದು ಯುವಕ ಮತ್ತು ಮುಸ್ಲಿಂ ಯುವತಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ವೇಳೆ ಜನರ ಕೈಗೆ ಸಿಕ್ಕು ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.
ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಎಸ್ಪಿ ಸಮ್ಮುಖದಲ್ಲಿ ವಿಚಾರಣೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಗೊತ್ತಾಗಬೇಕಿದೆ. ಹಾವೇರಿ ಹುಮ್ನಾಬಾದ್ ಓಣಿಯ ಯುವತಿ ಮತ್ತು ಹಾವೇರಿ ಮಾಚಾಪುರ ಗ್ರಾಮದ ಯುವಕ ಜಗದೀಶ ಕರೇಗೌಡ್ರ ಹಲ್ಲೆಗೋಳಗಾದವರು ಈ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿಲ್ಲ.
ಹಾನಗಲ್ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸರಿಯಾದ ರೀತಿಯಾದಂತಹ ತನಿಖೆ ನಡೆಸುತ್ತಿಲ್ಲವೆಂದು ಬಿಜೆಪಿ ಆಕ್ರೋಶ ಹೊರ ಹಾಕಿದ್ದು ಇಂದು ಹಾವೇರಿ ಜಿಲ್ಲೆಯ ಎಸ್ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಬಿಜೆಪಿ ಕಚೇರಿಯಿಂದ ಎಸ್ಪಿ ಕಚೇರಿಯವರೆಗೂ ನಡೆಸಲಿದೆ.
ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇನ್ನು ಅನೇಕ ಬಿಜೆಪಿ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಇದೀಗ ಮತ್ತೊಂದು ಅನೈತಿಕ ಪೊಲೀಸ್ ಗಿರಿ ಪ್ರಕರಣ ಬಳಕೆಗೆ ಬಂದಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ.