ಬೆಂಗಳೂರು : ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಶಾಕ್. ಶೀಘ್ರವೇ ನಂದಿನಿ ಪ್ಯಾಕೆಟ್ ಹಾಲಿನ ದರವನ್ನು 5 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಸುಳಿವು ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಲಾಗುವುದು. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಸಿಗಲಿದೆ. ಅಧಿವೇಶನ ಮುಗಿದ ಬಳಿಕ ಹಾಲಿನ ದರ ಏರಿಕೆಯಾಗಲಿದೆ. ಎಷ್ಟು ಏರಿಕೆಯಾಗುತ್ತದೆ ಎಂಬುದು ಇನ್ನೂ ಕೂಡ ಅಂತಿಮವಾಗಿಲ್ಲ ಎಂದರು.
ರೈತರಿಗೆ 5 ರೂ.ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಇಟ್ಟಿದ್ದೇವೆ. ಹಾಲಿನ ದರವನ್ನು 10 ರೂ. ಹೆಚ್ಚಳ ಮಾಡಬೇಕೆಂದು ರೈತರು ಬೇಡಿಕೆ ಇಟ್ಟಿದ್ದಾರೆ. ಆದರೆ 10 ರೂ. ಕೊಡಲಾಗದಿದ್ದರೂ 5 ರೂ. ಕೊಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮುಂದೆ ಬೇಡಿಕೆ ಇಟ್ಟಿದ್ದೇವೆ ಎಂದು ತಿಳಿಸಿದ್ದಾರೆ. ಈ ಹಣವನ್ನು ರೈತರಿಗೆ ಕೊಡುತ್ತೇವೆ ಎಂದು ಹೇಳಿದ್ದಾರೆ.