ಬೆಂಗಳೂರು : ಬಸ್ ಟಿಕೆಟ್ ದರ ಹೆಚ್ಚಳ, ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳದ ನಡುವೆ ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಬೆಂಗಳೂರಿನಲ್ಲಿ ಏ.1 ರಿಂದ ಪ್ರತಿ ಮನೆಯಿಂದ ಸಂಗ್ರಹಿಸುವ ಕಸಕ್ಕೂ ಶುಲ್ಕ ವಸೂಲಿಗೆ ಸರ್ಕಾರ ಅನುಮೋದನೆ ನೀಡಿದೆ.
ಹೌದು, ತ್ಯಾಜ್ಯ ಸಂಸ್ಕರಣೆ ಮಾಡದ ಅಪಾರ್ಟ್ಮೆಂಟ್ಗಳು ಅಥವಾ ದೊಡ್ಡ ವಾಣಿಜ್ಯ ಸಂಸ್ಥೆಗಳಂತಹ ಬೃಹತ್ ತ್ಯಾಜ್ಯ ಉತ್ಪಾದಕರಿಂದ ಪ್ರತಿ ಕೆ.ಜಿ. ತ್ಯಾಜ್ಯಕ್ಕೆ 12 ರೂ. ಬಳಕೆದಾರ ಶುಲ್ಕ ವಿಧಿಸಲು ಸರ್ಕಾರವು ಅವಕಾಶ ನೀಡಿದೆ. ಕಟ್ಟಡದ ವಿಸ್ತೀರ್ಣದ ಆಧಾರದ ಮೇಲೆ ಬಳಕೆದಾರ ಶುಲ್ಕ ನಿರ್ಧರಿಸಲಾಗುತ್ತದೆ ಎನ್ನಲಾಗಿದೆ.
600 ಚದರ ಅಡಿ ವರೆಗಿನ ಕಟ್ಟಡಗಳು ತಿಂಗಳಿಗೆ 10 ರೂ. ವರ್ಷಕ್ಕೆ 120 ರೂ. ಪಾವತಿಸಬೇಕು. 4,000 ಚದರ ಅಡಿಗಿಂತ ದೊಡ್ಡ ಕಟ್ಟಡಗಳಿಗೆ ತಿಂಗಳಿಗೆ ಗರಿಷ್ಠ 400 ರೂ. ವರ್ಷಕ್ಕೆ 4,800 ರೂ. ಪಾವತಿಸಬೇಕಾಗಿದೆ ಎಂದು ಹೇಳಲಾಗಿದೆ.