ವಿಜಯಪುರ : ಕಳೆದ ಕೆಲ ತಿಂಗಳುಗಳ ಹಿಂದೆ ಬಳ್ಳಾರಿ ಸಿರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರಣಿ ಬಾನಂತಿ ಸಾವು ಪ್ರಕರಣಗಳು ನಡೆದಿದ್ದವು ಇದೀಗ ವಿಜಯಪುರದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಒಬ್ಬರು ಸಾವನಪ್ಪಿದ್ದಾರೆ ಅಲ್ಲದೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಆಗ ತಾನೆ ಹುಟ್ಟಿದ ಮಗು ಕೂಡ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದಿದೆ.
ಜಿಲ್ಲೆಯ ಸಿಂದಗಿ ತಾಲೂಕಿನ ಢವಳಾರ ಗ್ರಾಮದ ನಿವಾಸಿ ಮೈತ್ರಾ ಸುಂಗಠಾಣ (30) ಮೃತ ಬಾಣಂತಿ. ಮೈತ್ರಾಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕುಟುಂಬಸ್ಥರು ಅವರನ್ನು ಕಾರಿನ ಮೂಲಕ ಮೊದಲು ಯಂಕಂಚಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅಲ್ಲಿನ ಸಿಬ್ಬಂದಿ ಹೆಚ್ಚಿನ ಚಿಕಿತ್ಸೆಗಾಗಿ ಸಿಂದಗಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.








