ದಕ್ಷಿಣಕನ್ನಡ : ಒಂದು ಕೊಡಿ ಹಾಸನದಲ್ಲಿ ಸರಣಿ ಹೃದಯಾಘಾತಕ್ಕೆ ಪ್ರತಿದಿನ ಜನ ಬಲಿಯಾಗುತ್ತಿದ್ದಾರೆ. ಇದೀಗ ದಕ್ಷಿಣ ಕನ್ನಡದಲ್ಲಿ ಯಲ್ಲಿ ಹೃದಯಘಾತಕ್ಕೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಗಂಪದಕೋಡಿಯ ವಜ್ರಾಕ್ಷ ಪೂಜಾರಿ (53) ಎನ್ನುವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಪದಕೋಡಿ ಗ್ರಾಮದ ನಿವಾಸಿಯಾಗಿದ್ದಾರೆ.
ನಿನ್ನೆ ರಾತ್ರಿ ವಜ್ರಾಕ್ಷ ಪೂಜಾರಿ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಉಜಿರೆಯ ಖಾಸಗಿ ಆಸ್ಪತ್ರೆಗೆ ವಜ್ರಾಕ್ಷ ಪೂಜಾರಿ ದಾಖಲಾಗಿದ್ದರು ಆಸ್ಪತ್ರೆಯಲ್ಲಿ ವಜ್ರಾಕ್ಷಾ ಪೂಜಾರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.