ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರು ಕೂಡ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಡೋಂಟ್ ಕೇರ್ ಎನ್ನುತ್ತೇವೆ. ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗೋಕರಿ ಗ್ರಾಮದಲ್ಲಿ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಸುಬ್ರಮಣಿ (38)ಎಂದು ತಿಳಿದುಬಂದಿದೆ. ಇವರು ಜನ ಫೈನಾನ್ಸ್ ಬ್ಯಾಂಕ್ ನಲ್ಲಿ 5 ಲಕ್ಷ ಲೋನ್ ಪಡೆದಿದ್ದರು. ಕಳೆದ ಕೆಲವು ಕಂತುಗಳು ಡ್ಯೂ ಇದ್ದಿದ್ದರಿಂದ ಬ್ಯಾಂಕ್ನಿಂದ ನೋಟಿಸ್ ಬಂದಿತ್ತು. ಮನೆ ಜಪ್ತಿ ಮಾಡುವುದಾಗಿ ಬ್ಯಾಂಕ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಜನ ಫೈನಾನ್ಸ್ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕಿರುಕುಳ ಆರೋಪ ಮಾಡಿ ಸೆಲ್ಫಿ ವಿಡಿಯೋ ಮಾಡಿದ್ದಾರೆ.
ಸೆಲ್ಫಿ ವಿಡಿಯೋದಲ್ಲಿ ನನ್ನ ಸಾವಿಗೆ ಜನ ಫೈನಾನ್ಸ್ ಬ್ಯಾಂಕ್ ಅಧಿಕಾರಿಗಳೇ ಕಾರಣ ಎಂದು ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಸುಬ್ರಮಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜನ ಫೈನಾನ್ಸ್ ಬ್ಯಾಂಕ್ ವಿರುದ್ಧ ಇದೀಗ ಮೃತನ ಕುಟುಂಬಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ. ಘಟನೆ ಕುರಿದಂತೆ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.