ಬೆಂಗಳೂರು : 2025-26 ನೇ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ/ನೌಕರರುಗಳ ವರ್ಗಾವಣೆ ಮಾಡುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತಾಲಯಕ್ಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ್ ಪಿಎಂ ಅವರುಮನವಿ ಮಾಡಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2019 ನೇ ಸಾಲಿನಲ್ಲಿ ಸಾರ್ವತ್ರಿಕವಾಗಿ ಅಧಿಕಾರಿ /ನೌಕರರುಗಳ ವರ್ಗಾವಣೆಯನ್ನು ಮಾಡಿದ್ದು, ನಂತರ ಇಲಾಖೆಯಲ್ಲಿ ಯಾವುದೇ ಸಾರ್ವತ್ರಿಕ ವರ್ಗಾವಣೆಯನ್ನು ಮಾಡಿರುವುದಿಲ್ಲ. ಇದರಿಂದ ಖಾಲಿ ಇರುವ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಲು ಅಧಿಕಾರಿ /ನೌಕರರುಗಳಿಗೆ ಸಾಧ್ಯವಾಗದೆ ಇರುವುದರಿಂದ ಅನಾನುಕೂಲ ಉಂಟಾಗಿರುತ್ತದೆ.
ಆದ್ದರಿಂದ 2025-26 ನೇ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ /ನೌಕರರುಗಳಿಗೆ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ವರ್ಗಾವಣೆ ನಿಯಂತ್ರಣ) ಕಾಯ್ದೆ 2011 ಹಾಗೂ ಕಾಲ ಕಾಲಕ್ಕೆ ಹೊರಡಿಸಲಾದ ತಿದ್ದುಪಡಿ ಕಾಯ್ದೆಯಡಿ ವರ್ಗಾವಣೆ ಮಾಡುವ ಮೂಲಕ ಅಧಿಕಾರಿ /ನೌಕರರುಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಲಾಗಿದೆ.