ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ( Karnataka Assembly Election 2023 ) ಕಾಂಗ್ರೆಸ್ ಟಿಕೆಟ್ ( Congress Ticket ) ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಅರ್ಜಿ ಸಲ್ಲಿಕೆಗೆ ನವೆಂಬರ್ 15 ಕೊನೇ ದಿನವಾಗಿತ್ತು. ಆದರೆ ಈ ಅವಧಿ ವಿಸ್ತರಣೆ ಮಾಡುವಂತೆ ರಾಜ್ಯದ ಮೂಲೆ, ಮೂಲೆಗಳಿಂದ ಪಕ್ಷದವರು ಹಾಗೂ ಅನ್ಯ ಪಕ್ಷಗಳಿಂದ ಕಾಂಗ್ರೆಸ್ ಗೆ ಬರಲು ಇಚ್ಚಿಸಿರುವ ಟಿಕೆಟ್ ಆಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ( KPCC President DK Shivakumar ) ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಂದಹಾಗೇ ಇಂದು ಮುಂಬರುವಂತ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆಯೋದಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಇದು ನಟಿ ಭಾವನಾ ಯಶವಂತಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದರೇ, ಕಾಂಗ್ರೆಸ್ ಯೂತ್ ಪ್ರೆಸಿಡೆಂಟ್ ಮೊಹಮ್ಮದ್ ನಲವಾಡ್ ಶಿವಾಜಿ ನಗರ ಕ್ಷೇತ್ರದ ಆಕಾಂಕ್ಷಿಯಾಗಿ ಟಿಕೆಟ್ ಸಲ್ಲಿಸಿದ್ದಾರೆ.