ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ /ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ।। ಬಿ.ಆರ್ೆ. ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 2026 ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರದ ಆದೇಶ ಸಂಖ್ಯೆ ಸಕಇ 94 ಮೊದೇಶಾ 2020 ಬೆಂಗಳೂರು ದಿನಾಂಕ 19-06-2021 ಮತ್ತು 12-11-2021 ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರ ಪತ್ರ ಸಂಖ್ಯೆ: KREIS/EDN/ADM/17/2025-EDU/261247 2 23-12-2025 2 02-01-2026 ವರ್ಗಗಳ ಕಲ್ಯಾಣ ಇಲಾಖೆ ಇವರ ಪತ್ರ ಪವಕಇ/KESTS:ಸಿಆರ್-20:2025-26 ದಿನಾಂಕ 22-12-2025 ರಂತೆ 2026-27ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಮತ್ತು ಪೋಷಕರ ಅನುಕೂಲಕ್ಕಾಗಿ ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಘೋಷಣಾ ಪತ್ರವನ್ನು ಪ್ರಚುರ ಪಡಿಸಲಾಗಿದೆ.
ಅಭ್ಯರ್ಥಿಗಳು / ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 10-01-2026 ರಿಂದ ಪ್ರಾಧಿಕಾರದ ವೆಬ್‌ಸೈಟಿನಿಂದ ಘೋಷಣಾ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ 25-01-2026 ಸಂಜೆ 4.00 ರೊಳಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ವಸತಿ ಶಾಲೆಗಳಿಗೆ ಸಲ್ಲಿಸಿ ಸ್ವೀಕೃತಿ ಪಡೆಯಲು ಸೂಚಿಸಿದೆ.
ಅರ್ಜಿ ಸಲ್ಲಿಸಲು ವರ್ಗಾವಾರು ವಾರ್ಷಿಕ ಆದಾಯದ ಮಿತಿ ಕೆಳಕಂಡಂತಿದೆ.

6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ಅರ್ಜಿ ಸಲ್ಲಿಸುವ ವಿಧಾನ, ಹಾಗೂ “ಮಾಹಿತಿ ಪುಸ್ತಕ-2026” ವನ್ನು ಪ್ರಾಧಿಕಾರದ ವೆಬ್ ಸೈಟ್ https://cetonline.karnataka.gov.in/kea/kreis2026 ವೆಬ್‌ಸೈಟ್ http://kreis.karnataka.gov.in ನಲ್ಲಿ ಪಡೆಯಬಹುದು. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ದಿನಾಂಕ 18-02-2026 ರಿಂದ ಈ ಮೇಲ್ಕಂಡ ವೆಬ್‌ಸೈಟ್‌ಗಳಿಂದ ಆಯಾ ವಸತಿ ಶಾಲೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ಗಮನಿಸಿ: ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ, ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು.
ಪ್ರವೇಶ ಪರೀಕ್ಷೆ-2026 ರ ವೇಳಾಪಟ್ಟಿ
01-03-2026-ಭಾನುವಾರ-ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ
ಅಂಕಗಳು -100
ವಸತಿ ಶಾಲೆಗಳ ಆಯ್ಕೆಯ ಆದ್ಯತಾ ಕ್ರಮದಲ್ಲಿ ನಮೂದಿಸುವ ಕುರಿತು: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿ /ವಿದ್ಯಾರ್ಥಿನಿಯರಿಗೆ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು. ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ನ ಎಲ್ಲಾ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದು. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerized Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುವುದು.









