Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ವಿಲ್’ ನ ಆಧಾರದ ಮೇಲೆ ಸಂಪೂರ್ಣ ಆಸ್ತಿ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

12/02/2026 9:37 AM

BREAKING : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಶೀಘ್ರದಲ್ಲೇ `ವಿದ್ಯುತ್ ದರ ಏರಿಕೆ’ ಸಾಧ್ಯತೆ !

12/02/2026 9:18 AM

ALERT : `ಡಿಜಿಟಲ್ ವ್ಯಸನ’ದಿಂದ ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

12/02/2026 9:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಾವು ಅಧಿಕಾರದಲ್ಲಿ ಇರುವವರೆಗೂ ಗ್ಯಾರಂಟಿ ಯೋಜನೆಗಳು ಇರುತ್ತವೆ : CM ಸಿದ್ದರಾಮಯ್ಯ
KARNATAKA

BIG NEWS : ನಾವು ಅಧಿಕಾರದಲ್ಲಿ ಇರುವವರೆಗೂ ಗ್ಯಾರಂಟಿ ಯೋಜನೆಗಳು ಇರುತ್ತವೆ : CM ಸಿದ್ದರಾಮಯ್ಯ

By kannadanewsnow5706/12/2024 5:41 AM

ಹಾಸನ : ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸನದಲ್ಲಿ ನಡೆದ ಬೃಹತ್ ಜನಕಲ್ಯಾಣೋತ್ಸವ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಾ.ರಾಜ್ ಅವರು ಅಭಿಮಾನಿಗಳನ್ನು ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರ ಬಂಧುಗಳೇ ದೇವರು. ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಆಶೀರ್ವದಿಸಿದ್ದಕ್ಕೆ ನನ್ನ ಅನಂತ ಧನ್ಯವಾದಗಳು. ಹಾಸನದ ಮಹಾನ್ ನಾಯಕರ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯನ್ನು ಚನ್ನಪಟ್ಟಣದಲ್ಲಿ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗನನ್ನು ಶಿಗ್ಗಾಂವಿಯಲ್ಲಿ ಜನ ಸೋಲಿಸಿ ನಮಗೆ ಆಶೀರ್ವದಿಸಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಆಗುವಷ್ಟು ಬಹುಮತ ಈ ರಾಜ್ಯದ ಜನತೆ ಯಾವತ್ತೂ ಕೊಟ್ಟಿಲ್ಲ. ಒಮ್ಮೆ ಕಾಂಗ್ರೆಸ್ ಬೆಂಬಲದಲ್ಲಿ ಮತ್ತೊಮ್ಮೆ ಬಿಜೆಪಿ ಬೆಂಬಲದಲ್ಲಿ ಮುಖ್ಯಮಂತ್ರಿ ಆದರು. ಬಳಿಕ ಎರಡೂ ಪಕ್ಷಗಳಿಗೆ ವಂಚಿಸಿದರು ಎಂದು ಕಿಡಿಕಾರಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಸುಭದ್ರ ಸರ್ಕಾರ ಕೊಟ್ಟಿದೆ. ಇಷ್ಟು ಮಾತ್ರವಲ್ಲ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಕೊಟ್ಟ ಮಾತು ಉಳಿಸಿಕೊಂಡಿದೆ. 2013 ರಲ್ಲಿ ಕೊಟ್ಟ ಮಾತಿನಂತೆ ಹಲವಾರು ಭಾಗ್ಯಗಳನ್ನು ಜಾರಿ ಮಾಡಿದೆವು‌. ಈ ಬಾರಿ ಐದಕ್ಕೆ ಐದೂ ಗ್ಯಾರಂಟಿಗಳ ಜೊತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನೂ ಈಡೇರಿಸುತ್ತಿದ್ದೇವೆ. ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ನಾವು ದುಡ್ಡು ಕೊಡ್ತೀವಿ ಅಂದರೂ ಅಕ್ಕಿ ಕೊಡಲಿಲ್ಲ. ಇಂಥಾ ಜನದ್ರೋಹಿ ಸರ್ಕಾರ ಬಿಜೆಪಿಯದ್ದು. ನಾವು ಐದು ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯದ ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಈ ಐದು ಗ್ಯಾರಂಟಿಗಳನ್ನು ಪಡೆಯುತ್ತಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ದೊಡ್ಡ ಜನದ್ರೋಹಿಗಳು ಎಂದರು.

ಕೇಂದ್ರದಲ್ಲಿ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿಯವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಏಕೆ? ಬೆಂಗಳೂರಿನ ಜನತೆಗೆ ನೀರು ಬೇಕಾಗಿದೆ, ಈಗ ಕೊಡಿಸಲಿ. ಮಾಜಿ ಪ್ರಧಾನಿ ದೇವೇಗೌಡರು ನನಗಿಂತ 15 ವರ್ಷ ಹಿರಿಯರು. ಅವರು ಅಷ್ಟೆ ಘನತೆಯಿಂದ ಮಾತಾಡಬೇಕಿತ್ತು. ಯಾವತ್ತೂ ಗರ್ವ ತೋರಿಸದ ನನಗೆ, “ಸಿದ್ದರಾಮಯ್ಯ ಅವರ ಗರ್ವಭಂಗ ಮಾಡ್ತೀನಿ” ಎಂದರು. ಇದನ್ನು ನೀವು ಒಪ್ಪಿಕೊಳ್ಳುತ್ತೀರಾ? ಸಹಿಸುತ್ತೀರಾ?

ಹಾಸನದ ಹೆಣ್ಣು ಮಕ್ಕಳು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ರೈತರ ಪಾಲಿನ ಸಬಾರ್ಡ್ ಸಾಲದಲ್ಲಿ ಶೇ58 ರಷ್ಟನ್ನು ಕಡಿತಗೊಳಿಸಿದೆ. ಇದರಿಂದ ಹಾಸನದ ರೈತರು ಮತ್ತು ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಮಗ ಎಂದುಕೊಂಡಿರುವ ಕುಮಾರಸ್ವಾಮಿಯವರು ಏಕೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿಲ್ಲ? ನಬಾರ್ಡ್ ನಿಂದ ಆಗಿರುವ ಅನ್ಯಾಯವನ್ನು ಕುಮಾರಸ್ವಾಮಿ ಅವರು ಏಕೆ ಸರಿಪಡಿಸುತ್ತಿಲ್ಲ? ಕಳೆದ ಹಣಕಾಸು ವರ್ಷದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ನಷ್ಟ ಆಗಿರುವ 11 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯಕ್ಕೆ ಕೊಡಿಸಲು ಬಿಜೆಪಿ-ಜೆಡಿಎಸ್ ಏಕೆ ಬಾಯಿ ಬಿಡುತ್ತಿಲ್ಲ?

ರಾಜ್ಯಕ್ಕೆ, ರಾಜ್ಯದ ಜನರಿಗೆ ಆಗುತ್ತಿರುವ ಅನ್ಯಾಯ ಕುಮಾರಸ್ವಾಮಿ ಮತ್ತು ಬಿಜೆಪಿ ಸಂಸದರು ತಾಕತ್ತಿದ್ದರೆ ಸರಿಪಡಿಸಲಿ. ದೇವೇಗೌಡರು ರಾಜಕೀಯವಾಗಿ ಒಕ್ಕಲಿಗ ನಾಯಕರನ್ನು ನಿರಂತರವಾಗಿ ಮುಗಿಸುತ್ತಿದ್ದಾರೆ. ಬಚ್ಚೇಗೌಡರು, ವೈ.ಕೆ.ರಾಮಯ್ಯ, ಬೈರೇಗೌಡರು, ಕೃಷ್ಣಪ್ಪ, ಚಲುವರಾಯಸ್ವಾಮಿ ಸೇರಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ದೇವೇಗೌಡರು ರಾಜಕೀಯವಾಗಿ ಮುಗಿಸಿದರು. ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪ ಅವರು ಆಗಲೇ ಈ ಪಾಪದ ಹೊರೆಯನ್ನು ಹೊರಬೇಕಾಗುತ್ತದೆ ಎಂದು ದೇವೇಗೌಡರಿಗೆ ಹೇಳಿದ್ದರು. ಈಗ ಒಕ್ಕಲಿಗ ನಾಯಕ ಕೃಷ್ಣಪ್ಪ ಅವರ ಮಾತು ನಿಜವಾಗಿದೆ.

ನಾನು ಮತ್ತು ಜಾಲಪ್ಪ ಒಟ್ಟಾಗಿ ರಾಮಕೃಷ್ಣ ಹೆಗಡೆಯವರ ಬದಲಿಗೆ ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದೆವು. ಆಮೇಲೆ ನನ್ನನ್ನೇ ಪಕ್ಷದಿಂದ ಉಚ್ಚಾಟಿಸಿದರು. ಕಾಂಗ್ರೆಸ್ ಸರ್ಕಾರ ಮಾತ್ರ ಸುಭದ್ರ ಸರ್ಕಾರ ಕೊಡಲು ಸಾಧ್ಯ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಇದು ಶತಸಿದ್ಧ ಎಂದು ಹೇಳಿದ್ದಾರೆ.

BIG NEWS: As long as we are in power there will be guarantee schemes: CM Siddaramaiah
Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಶೀಘ್ರದಲ್ಲೇ `ವಿದ್ಯುತ್ ದರ ಏರಿಕೆ’ ಸಾಧ್ಯತೆ !

12/02/2026 9:18 AM1 Min Read

ALERT : `ಡಿಜಿಟಲ್ ವ್ಯಸನ’ದಿಂದ ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

12/02/2026 9:12 AM2 Mins Read

ನೀವು ಮನೆ ಖರೀದಿಸಲು ಹೊರಟಿದ್ದರೆ ಈ ವಿಷಯಗಳನ್ನು ನೆನಪಿಟ್ಟುಕೊಳ್ಳಿ.!

12/02/2026 8:51 AM2 Mins Read
Recent News

BIG NEWS : `ವಿಲ್’ ನ ಆಧಾರದ ಮೇಲೆ ಸಂಪೂರ್ಣ ಆಸ್ತಿ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

12/02/2026 9:37 AM

BREAKING : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಶೀಘ್ರದಲ್ಲೇ `ವಿದ್ಯುತ್ ದರ ಏರಿಕೆ’ ಸಾಧ್ಯತೆ !

12/02/2026 9:18 AM

ALERT : `ಡಿಜಿಟಲ್ ವ್ಯಸನ’ದಿಂದ ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

12/02/2026 9:12 AM

ಪಾಕ್‌ನಲ್ಲಿ ಹೆಚ್ಚಿದ ಭೀತಿ: ಬಂಡುಕೋರರ ಕೈಗೆ ಅತ್ಯಾಧುನಿಕ ಆಯುಧ, ಮಹಿಳೆಯರೇ ಈಗ ದಾಳಿಕೋರರು!

12/02/2026 9:09 AM
State News
KARNATAKA

BREAKING : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಶೀಘ್ರದಲ್ಲೇ `ವಿದ್ಯುತ್ ದರ ಏರಿಕೆ’ ಸಾಧ್ಯತೆ !

By kannadanewsnow5712/02/2026 9:18 AM KARNATAKA 1 Min Read

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ…

ALERT : `ಡಿಜಿಟಲ್ ವ್ಯಸನ’ದಿಂದ ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

12/02/2026 9:12 AM

ನೀವು ಮನೆ ಖರೀದಿಸಲು ಹೊರಟಿದ್ದರೆ ಈ ವಿಷಯಗಳನ್ನು ನೆನಪಿಟ್ಟುಕೊಳ್ಳಿ.!

12/02/2026 8:51 AM

`ಶ್ರೀಶೈಲಂ ಜಾತ್ರೆ’ಗೆ ಹೋಗುವ ಭಕ್ತರೇ ಗಮನಿಸಿ : ವಿಶೇಷ ಬಸ್ಸುಗಳ ಕಾರ್ಯಾಚರಣೆ

12/02/2026 8:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.