Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪ್ರಧಾನಿ ಮೋದಿ 12 ವರ್ಷಗಳ ಐತಿಹಾಸಿಕ ಸಾಧನೆ: ಇಂದು ‘ಭಾರತ ಮಂಡಪ’ದಲ್ಲಿ ಎನ್‌ಡಿಎ ಮುಖ್ಯಮಂತ್ರಿಗಳ ಮಹತ್ವದ ಸಭೆ

BIG NEWS : ವಿವಾಹಪೂರ್ವ ಲೈಂಗಿಕ ಸಂಬಂಧ ಚಾರಿತ್ರ್ಯವನ್ನು ನಿರ್ಣಯಿಸಲು ಮಾನದಂಡವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

GOOD NEWS : ಕ್ಯಾನ್ಸರ್‌ ರೋಗಿಗಳಿಗೆ ಸಿಕ್ತು ಸಂಜೀವಿನಿ : ರೋಗಿಗಳ ಜೀವಿತಾವಧಿ ದ್ವಿಗುಣಗೊಳಿಸಬಲ್ಲ ಹೊಸ ಮಾತ್ರೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಾ.3 ರಿಂದ ವಿಧಾನಮಂಡಲದ ಅಧಿವೇಶನ, ಮಾ.7 ರಂದು `ರಾಜ್ಯ ಬಜೆಟ್’ ಮಂಡನೆ | Karnataka Budget 2025
KARNATAKA

BIG NEWS : ಮಾ.3 ರಿಂದ ವಿಧಾನಮಂಡಲದ ಅಧಿವೇಶನ, ಮಾ.7 ರಂದು `ರಾಜ್ಯ ಬಜೆಟ್’ ಮಂಡನೆ | Karnataka Budget 2025

By kannadanewsnow57

ಬೆಂಗಳೂರು : ವಿಧಾನಮಂಡಲದ ಅಧಿವೇಶನ ಮಾರ್ಚ್ 3 ರಿಂದ ಆರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು 3 ರಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್‌ 4, ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. 

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದೆ. ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು. ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು. ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.

ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಇಂದು ರೈತ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಿದ್ದೇನೆ. ರೈತರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ತಯಾರಿಸುವಾಗ ಇತಿಮಿತಿಯೊಳಗೆ ಸಲಹೆಗಳನ್ನು ಸೇರ್ಪಡೆ ಮಾಡಲಾಗುವುದು. ಕರ್ನಾಟಕ ಸರ್ಕಾರ ರೈತರ ಹಿತವನ್ನು ಕಾಪಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಯಾವತ್ತೂ ರೈತರ ಪರವಾಗಿದ್ದು, ಕೃಷಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಇರಲಿದೆ ಎಂದರು.

ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದೆ. ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು…

— Siddaramaiah (@siddaramaiah) February 17, 2025

ಮೆಟ್ರೋ ರೈಲಿನ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ನೇಮಕ ಮಾಡಿರುವ ಸಮಿತಿ. ಮೆಟ್ರೋ ಸ್ವಾಯತ್ತ ಸಂಸ್ಥೆಯಾದರೂ, ಸಮಿತಿಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿರುತ್ತಾರೆ. ಬೆಲೆ ನಿಗದಿ ಮಾಡಲು ರಾಜ್ಯ ಸರ್ಕಾರ ಪ್ರಸ್ತಾವನೆ ನೀಡುತ್ತದೆ. ಬೆಲೆ ನಿಗದಿ ಮಾಡುವ ಸಮಿತಿಯ ಅಧ್ಯಕ್ಷರನ್ನು ನೇಮಕ ಮಾಡುವುದು ಕೇಂದ್ರ ಸರ್ಕಾರ. ಪ್ರಸ್ತುತ ತಮಿಳುನಾಡು ರಾಜ್ಯದ ನಿವೃತ್ತ ನ್ಯಾಯಾಧೀಶರು ಅಧ್ಯಕ್ಷರಾಗಿದ್ದಾರೆ.

ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ. ಯಾವ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾವತಿಯಲ್ಲಿ ಆಗಿರುವ ವಿಳಂಬವನ್ನು ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಗಳಿಗೆ ನಾವು ಸಿದ್ಧರಾಗಿದ್ದು, ಉಚ್ಛ ನ್ಯಾಯಾಲಯದ ಸೂಚನೆ ಮೇರೆಗೆ ಚುನಾವಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

BIG NEWS: ASSEMBLY SESSION TO BEGIN FROM MARCH 3 state budget to be presented on March 7 | Karnataka Budget 2025
Share. Facebook Twitter LinkedIn WhatsApp Email

Related Posts

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

1 Min Read

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

1 Min Read
Recent News

​ಪ್ರಧಾನಿ ಮೋದಿ 12 ವರ್ಷಗಳ ಐತಿಹಾಸಿಕ ಸಾಧನೆ: ಇಂದು ‘ಭಾರತ ಮಂಡಪ’ದಲ್ಲಿ ಎನ್‌ಡಿಎ ಮುಖ್ಯಮಂತ್ರಿಗಳ ಮಹತ್ವದ ಸಭೆ

BIG NEWS : ವಿವಾಹಪೂರ್ವ ಲೈಂಗಿಕ ಸಂಬಂಧ ಚಾರಿತ್ರ್ಯವನ್ನು ನಿರ್ಣಯಿಸಲು ಮಾನದಂಡವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

GOOD NEWS : ಕ್ಯಾನ್ಸರ್‌ ರೋಗಿಗಳಿಗೆ ಸಿಕ್ತು ಸಂಜೀವಿನಿ : ರೋಗಿಗಳ ಜೀವಿತಾವಧಿ ದ್ವಿಗುಣಗೊಳಿಸಬಲ್ಲ ಹೊಸ ಮಾತ್ರೆ!

​12 ವರ್ಷಗಳ ಆಡಳಿತ: ಭಾರತದ ಸುದೀರ್ಘಾವಧಿಯ ಪ್ರಧಾನಿಯಾಗಿ ನರೇಂದ್ರ ಮೋದಿ ದಾಖಲೆ

State News
KARNATAKA

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳ ಆರ್ಭಟ ಜೋರಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು…

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ಗ್ರಾಹಕರ ಗಮನಕ್ಕೆ : ಇಂದಿನಿಂದ ರಾಜ್ಯದ 20 ಪಟ್ಟಣಗಳಲ್ಲಿ ಬಿಲ್‌ ಪಾವತಿ ಸೇರಿ ಬೆಸ್ಕಾಂನ ಹಲವು ಆನ್‌ಲೈನ್ ಸೇವೆ 21 ದಿನ ಬಂದ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.