ರಾಯಚೂರು : ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಪಟ್ಟಣ ಪಂಚಾಯತಿ ಅಧಿಕಾರಿ ಒಬ್ಬ ವ್ಯಕ್ತಿ ಒಬ್ಬರ ಬಳಿ 1 ಲಕ್ಷ ಪಡೆದು ಲೋಕಾಯುಕ್ತ ಅಧಿಕಾರಿಗಳು ಬರುತ್ತಿದ್ದದ್ದನ್ನು ಕಂಡು ಅಲ್ಲಿಂದ ಪರಾರಿಯಾಗಿ ಯತ್ನಿಸಿದ್ದಾನೆ. ಈ ವೇಳೆ ಸಿನಿಮಾ ಸ್ಟೈಲ್ ನಲ್ಲಿ ಆತನನ್ನು ಚೇಸ್ ಮಾಡಿ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಕೆಡುವಲ್ಲಿ ಯಶಸ್ವಿಯಾಗಿದ್ದಾರೆ.
ಹೌದು ಈ-ಖಾತೆ ಮಾಡಲು ಅಧಿಕಾರಿ ಸುರೇಶ್ ಶೆಟ್ಟಿ 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಅದರಂತೆ 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ರಾಘವೇಂದ್ರ ರೆಡ್ಡಿ ಎಂಬವರಿಗೆ 2 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಮುಖ್ಯಾಧಿಕಾರಿ ಅಡ್ವಾನ್ಸ್ ಆಗಿ ಒಂದು ಲಕ್ಷ ರೂ. ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದಾನೆ.
ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತರು ಬರುತ್ತಿದ್ದಂತೆ ಎಸ್ಕೇಪ್ ಆಗಲು ನೋಡಿದ್ದ ಅಧಿಕಾರಿ ಸಿರವಾರದಿಂದ ಕವಿತಾಳ ಪಟ್ಟಣದ ಕಡೆಗೆ ಪರಾರಿಯಾಗಲು ಪ್ರಯತ್ನಿಸಿದ್ದ. ಸಿನಿಮೀಯ ರೀತಿ ಕಾರಿನಲ್ಲಿ ಚೇಸ್ ಮಾಡಿ ಅಧಿಕಾರಿಯನ್ನು ಲೋಕಾಯುಕ್ತರು ಹಿಡಿದಿದ್ದಾರೆ. ಸದ್ಯ ಕವಿತಾಳ ಪ್ರವಾಸಿ ಮಂದಿರದಲ್ಲಿ ಅಧಿಕಾರಿಯ ವಿಚಾರಣೆ ಹಾಗೂ ಪಂಚನಾಮೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.








