ಮಂಗಳೂರು : ಮಂಗಳೂರಿನಲ್ಲಿ ಡ್ರಗ್ಸ್ ಮಾಡಲು ಯತ್ನಿಸಿದ ಮೂವರು ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ ತಲಪಾಡಿಯಲ್ಲಿ ಮಾದಕ ವಸ್ತು MDMA ಮಾರಾಟ ಮಾಡಲು ಯತ್ನಿಸಿದ್ದು ಬೆಂಗಳೂರಿನಿಂದ MDMA ತಂದು ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಉಳ್ಳಾಲದ ಮುಸ್ತಫ (34) ಮೈಯೆದ್ದಿ (28) ಮೊಹಮ್ಮದ್ (28) ಎನ್ನುವ ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 11.9 ಲಕ್ಷ ರೂಪಾಯಿ ಮೌಲ್ಯದ 118.13 ಗ್ರಾಂ MDMA ವಶಕ್ಕೆ ಪಡೆದಿದ್ದಾರೆ.
ಈ ಡ್ರಗ್ಸ್ ವಿಚಾರದಲ್ಲಿ ಇನ್ನೂ ಹಲವಾರು ಭಾಗಿಯಾಗಿರುವ ಮಾಹಿತಿ ತಿಳಿದು ಬಂದಿದೆ. ಉಳಿದ ಆರೋಪಿಗಳಿಗಾಗಿ ಸಿಸಿಬಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಿಸಿಬಿ ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿತ್ತು.








