ಕೊಪ್ಪಳ : ನಿನ್ನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಹಾಡಹಗಲೇ ಬಸ್ ನಿಲ್ದಾಣದ ಬಳಿ ಮಾನಸಿಕ ಅಸ್ವಸ್ಥೆಯನ್ನು ಕರೆದೋಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಕನಕಗಿರಿ ಪೊಲೀಸರು ಆರೋಪಿ ಪ್ರಕಾಶ್ ರಾಮಣ್ಣ ಬೋವಿ ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಹೌದು ಹಗಲಲ್ಲೆ ಕಾಮುಕನೊಬ್ಬ ಮಾನಸಿಕ ಅಸ್ವಸ್ಥೆ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಬುಧವಾರ ನಡೆದಿದೆ. ಸದ್ಯ ಪ್ರಕಾಶ ರಾಮಣ್ಣ ಭೋವಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ.
ಘಟನೆ ಹಿನ್ನೆಲೆ?
ಬಸ್ ನಿಲ್ದಾಣದ ರಕ್ಷಣಾ ಗೋಡೆ ಒಳಗೆ ನಿರ್ಮಾಣವಾಗುತ್ತಿರುವ ಹೈಟೆಕ್ ಶೌಚಾಲಯಗಳ ಹಿಂಭಾಗದಲ್ಲಿ ಪ್ರಕಾಶ ಭೋವಿ 30ರಿಂದ35 ವರ್ಷದ ಮಾನಸಿಕ ಅಸ್ವಸ್ಥೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ಟಂ ಟಂ ನಲ್ಲಿ ಹೋಗುತ್ತಿರುವ ಯುವಕರು ಇದನ್ನು ವಿಡಿಯೋ ತೆಗೆಯಲು ಮುಂದಾಗಿದ್ದಾಗ ಅಲ್ಲಿಂದ ಮೊಬೈಲ್‌ನಲ್ಲಿ ಮಾತನಾಡುತ್ತಾ ಅಲ್ಲಿಂದ ಕಾಲ್ಕಿತ್ತಿದ್ದಾನೆ.
ಈ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿದ್ದರಿಂದ ಎಚ್ಚೇತ್ತ ಪೊಲೀಸರು ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ಮಾಡಿದ್ದಾರೆ. ನಂತರ ಸಿಡಿಪಿಒ ವಿರುಪಾಕ್ಷಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದು, ವ್ಯಕ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದಾರೆ.