ಬೆಂಗಳೂರು : ನಗರದ ರಸ್ತೆಗಳು, ಕಾಲುವೆಗಳು ಹಾಗು ಬ್ಲಾಕ್ ಸ್ಟಾಟ್‌ಗಳಿಗೆ ಕಸ ಎಸೆದರೆ ಇನ್ನು ಮುಂದೆ 2 ಸಾವಿರ ರೂ.ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಘನತಾಜ್ಯ ನಿರ್ವಹಣಾ ಕಂಪನಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಕರೀಗೌಡ ತಿಳಿಸಿದ್ದಾರೆ.
ಬೆಂಗಳೂರಿನ ವಸಂತ ನಗರದಲ್ಲಿರುವ ಘನತಾಜ್ಯ ನಿರ್ವಹಣಾ ಕಂಪನಿಯ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೊಟ್ಟು ನಡೆಸಿ ಮಾತನಾಡಿದ ಅವರು, ಈವರೆಗೆ ರಸ್ತೆಗೆ ಕಸ ಎಸೆದರೆ ಮೊದಲ ಬಾರಿಗೆ 500ರೂ. ಎರಡನೇ ಬಾರಿಗೆ 1 ಸಾವಿರ ರೂ. ಮೂರನೇ ಬಾರಿಗೆ 2 ರೂ. ಸಾವಿರ ದಂಡ ಹಾಕಲಾಗುತ್ತಿತ್ತು. ಇನ್ನು ಮುಂದೆ 2 ಸಾವಿರ ರು. ದಂಡ ವಿಧಿಸುವುದಕ್ಕೆ ತೀರ್ಮಾನಿಸಲಾಗಿದೆ.
ಹಾಗಾಗಿ, ನಗರದ ಪ್ರತಿಯೊಬ್ಬರು ಹಸಿ ಮತ್ತು ಹಸಿ ಕಸ ಮತ್ತು ಒಣ ಕಸ ಬೆರ್ಪಡಿಸಿ ಆಟೋಗಳಿಗೆ ನೀಡುವಂತೆ ಮನವಿ ಮಾಡಿದರು. ಕಳೆದ ಆಗಸ್ಟ್‌ನಲ್ಲಿ ನಗರದಲ್ಲಿ 1483 ಬ್ಲಾಕ್ ಸ್ಟಾಟ್ ಗಳಿ ಕುರಿತು ದೂರು ಬಂದಿದ್ದವು, ಈ ಪೈಕಿ 1454 ಸ್ಪಾಟ್ ಗಳನ್ನು ಸ್ವಚ್ಛಗೊಳಿಸಲಾಗಿತ್ತು. ಸೆಪ್ಟೆಂಬರ್‌ನಲ್ಲಿ 515 ದೂರು ಬಂದಿದ್ದು, 423 ಸ್ವಚ್ಛಗೊಳಿಸಲಾಗಿದ್ದು, ಇನ್ನೂ 92 ಸ್ವಚ್ಛಗೊಳಿಸಬೇಕಿದೆ ಎಂದು ಅವರು ವಿವರಿಸಿದರು.
ನಗರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಉದ್ದೇಶದಿಂದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಯಿಂದ ಸಹಾಯಕ ಪ್ರಧಾನ ವ್ಯವಸ್ಥಾಪಕರ ನೇತೃತ್ವ ದಲ್ಲಿ 27 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಪ್ಲಾಸ್ಟಿಕ್ ತಯಾರಕರು, ಸಗಟು ಮಾರಾಟಗಾರರನ್ನು ಗುರಿಯಾಗಿಸಿಕೊಂಡು 49.14 ಲಕ್ಷ ರು. ಮೌಲ್ಯದ 34.57 ಟನ್ ಪ್ಲಾಸ್ಟಿಕ್ ವಶಪಡಿಸಿಕೊಂಡು 38.07 ಲಕ್ಷ ರು. ದಂಡ ವಿಧಿಸಲಾಗಿದೆ ಎಂದು ತಿಳಿಸಿದರು.