ಬೆಂಗಳೂರು : ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿಗಳು ಮತ್ತು ರಜಾ ಅವಧಿಗಳನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಲ್ಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2025 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ. ಪ್ರಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ತಿಳಿಸಿದೆ.
ವಿಶೇಷ ಸೂಚನೆಗಳು:
A. 2024-25 ನೇ ಶೈಕ್ಷಣಿಕ ಸಾಲಿನ ಮುಕ್ತಾಯ ಹಂತದಲ್ಲಿ ನಿರ್ವಹಿಸಬೇಕಾದ ಅಂಶಗಳ ಕುರಿತು
1) 1 ರಿಂದ 9ನೇ ತರಗತಿವರೆಗೆ ಮೌಲ್ಯಾಂಕನ ಪರೀಕ್ಷೆಗಳ ಮೌಲ್ಯಮಾಪನವನ್ನು ಪೂರ್ಣಗೊಳಿಸಿ ಫಲಿತಾಂಶವನ್ನು ಶೇ 100 ಅಂಕಗಳಿಗೆ ಕ್ರೋಢೀಕರಿಸಿ ನಿಯಮಾನುಸಾರ ಗ್ರೇಡ್ ದಾಖಲಿಸಿ SATS ನಲ್ಲಿ ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ದಿನಾಂಕ:07-04-2025 ರೊಳಗೆ ಹಾಗೂ ಪ್ರೌಢಶಾಲೆಗಳಿಗೆ ಸಂಬಂಧಿಸಿದಂತೆ ದಿನಾಂಕ:08-04-2025ರೊಳಗೆ ಇಂದೀಕರಿಸತಕ್ಕದ್ದು.
2) 5, 8 ಮತ್ತು 9ನೇ ತರಗತಿಯ SA-2 ಮೌಲ್ಯಾಂಕನ ಸೇರಿದಂತೆ ಉಳಿದ 1 ರಿಂದ 9 ನೇ ತರಗತಿಗಳ ಫಲಿತಾಂಶವನ್ನು ನಿಯಮಾನುಸಾರ ವಿಶ್ಲೇಷಿಸಿ, ನಿಗದಿಪಡಿಸಿದಂತೆ ದಿನಾಂಕ 08.04.2025 ರಂದು ಪ್ರಾಥಮಿಕ ಶಾಲಾ ಹಂತದಲ್ಲಿ ಹಾಗೂ ದಿನಾಂಕ 09.04.2025 ರಂದು ಪ್ರೌಢಶಾಲಾ ಹಂತದಲ್ಲಿ ಎರಡನೇ ಸಮುದಾಯ ದತ್ತ ಶಾಲೆ/ಪೋಷಕರ ಸಭೆ ಕರೆದು ಪ್ರಕಟಣೆ ಮಾಡುವುದು.
3) ದಿನಾಂಕ:14-04-2025 ರಂದು ಡಾ|| ಬಿ.ಆರ್ ಅಂಬೇಡ್ಕರ್ ರವರ ಜಯಂತಿಯನ್ನು ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಹಾಗೂ ಎಸ್.ಡಿ.ಎಂ.ಸಿ/ಖಾಸಗಿ ಶಾಲೆಗಳಲ್ಲಿ ಸಂಬಂಧಿಸಿದ ಆಡಳಿತ ಮಂಡಳಿಯವರು ಮತ್ತು ಮಕ್ಕಳೊಂದಿಗೆ ಉತ್ತಮ ಪೂರ್ವ ತಯಾರಿಯೊಂದಿಗೆ ಆಚರಿಸತಕ್ಕದ್ದು.
4) ಶಾಲಾ ಸ್ಥಳೀಯ ರಜೆಗಳಿಗೆ ಸಂಬಂಧಿಸಿದಂತೆ ಶಾಲಾವಾರು ನಿರ್ದಿಷ್ಟಪಡಿಸಿದ ದಿನಾಂಕಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೂರ್ವಭಾವಿಯಾಗಿ ಜೂನ್-2025 ರ ಮೊದಲನೇ ವಾರದಲ್ಲಿ ಅನುಮೋದನೆ ನೀಡುವುದು. ಅನುಮೋದಿಸಿದ ದಿನಾಂಕಗಳಿಗೆ ಮಾತ್ರ ಸ್ಥಳೀಯ ರಜೆ ಹೊಂದುವುದು.
5) 2025-26 ನೇ ಸಾಲಿಗೆ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ 02 ಜೊತೆ ಉಚಿತ ಸಮವಸ್ತ್ರ, ಮತ್ತು ಪಠ್ಯಪುಸ್ತಕ ಹಾಗೂ ಖಾಸಗಿ ಶಾಲೆಗಳಿಗೆ ಪಠ್ಯಪುಸ್ತಕಗಳು ಸಂಬಂಧಿಸಿದ ತಾಲ್ಲೂಕುಗಳಿಗೆ ಸರಬರಾಜು ಆದ ತಕ್ಷಣ ಸಂಬಂಧಿಸಿದ ಶಾಲೆಗಳ ಮುಖ್ಯೋಪಾಧ್ಯಾಯರ ಮುಖಾಂತರ ಮಕ್ಕಳಿಗೆ ತಲುಪಿಸುವ ಕುರಿತು ಕ್ರಮವಹಿಸುವುದು.
6) ದಿನಾಂಕ:11-04-2025 ರಿಂದ ದಿನಾಂಕ:28-05-2025 ರವರೆಗೆ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆಯಾಗಿರುವುದರಿಂದ ಶಾಲಾ ಮುಖ್ಯಸ್ಥರು ಶಾಲಾ ದಾಸ್ತಾನು ಮತ್ತು ದಾಖಲೆಗಳನ್ನು ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ ಮಧ್ಯಾಹ್ನದ ಬಿಸಿಯೂಟದ ಸಾಮಗ್ರಿಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡುವುದು ಹಾಗೂ ಬರಪೀಡಿತ ತಾಲ್ಲೂಕುಗಳಲ್ಲಿ ರಜಾ ಅವಧಿಯಲ್ಲಿ ಮಕ್ಕಳಿಗೆ ಬಿಸಿ ಊಟ ನೀಡುವ ಕುರಿತು ಸಂಬಂಧಿಸಿದ ನಿರ್ದೇಶನಾಲಯದಿಂದ ನೀಡುವ ಸೂಚನೆಗಳಂತೆ ಕ್ರಮವಹಿಸುವುದು. ಒಂದು ವೇಳೆ ಈ ಅವಧಿಯಲ್ಲಿ ಅಧಿಕೃತ ಚುನಾವಣಾ ಕಾರ್ಯಕ್ಕೆ ಮತಗಟ್ಟೆ ಕೇಂದ್ರಗಳನ್ನಾಗಿ ಶಾಲೆಗಳನ್ನು ಬಳಸಲು ಸಂಬಂಧಿಸಿದ ಪ್ರಾಧಿಕಾರ ಕೋರಿದ್ದಲ್ಲಿ ಸಹಕರಿಸಲು ಸೂಚಿಸಿದೆ.
2025-26 ನೇ ಸಾಲಿನ ಶಾಲಾ ಕರ್ತವ್ಯದ ದಿನಗಳು
2025-26 ನೇ ಶೈಕ್ಷಣಿಕ ಸಾಲಿಗೆ ಶಾಲಾ ಕರ್ತವ್ಯದ ದಿನಗಳು ಮತ್ತು ರಜಾ ದಿನಗಳ ವಿವರ