ಬೆಂಗಳೂರು : ವಯೋನಿವೃತ್ತಿ/ಸ್ವ ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಪ್ರಸ್ತಾವನೆಯನ್ನು ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರ ಕಛೇರಿಗೆ ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ.
ಏನಿದೆ ಸರ್ಕಾರದ ಆದೇಶದಲ್ಲಿ?
ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ವಯೋ ನಿವೃತ್ತಿ / ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ONLINE (K2) ನಲ್ಲಿ ದಾಖಲಿಸಿ ಮಂಜೂರು ಮಾಡುವುದು ಹಾಗೂ ಭೌತಿಕವಾಗಿ ಸಿದ್ಧಪಡಿಸಿರುವ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಮಹಾಲೇಖಪಾಲರ ಕಛೇರಿಗೆ ನಿಯಮಾನುಸಾರ ಸಲ್ಲಿಸಲು ಉಲ್ಲೇಖಿತ ಪತ್ರದಲ್ಲಿ ಆದೇಶಿಸಲಾಗಿರುತ್ತದೆ.
ಮೇಲಿನ ಆದೇಶದನ್ವಯ ಖಜಾನ – 2ರ ತಂತ್ರಾಂಶದ ಮುಖಾಂತರ ಪಿಂಚಣಿ ಅರ್ಜಿಗಳನ್ನು ಮಹಾಲೇಖಪಾಲರಿಗೆ ಸಲ್ಲಿಸುವ ಕುರಿತು ದಿನಾಂಕ: 12-02-2026ರ ಮಧ್ಯಾಹ್ನ 3.15ಕ್ಕೆ VIDEO CONFERENCE ಮೂಲಕ ತರಬೇತಿಯನ್ನು ಅಯೋಜಿಸಲಾಗಿದ್ದು ಸದರಿ ತರಬೇತಿಗೆ ಕಾಲೇಜು ಶಿಕ್ಷಣ ಇಲಾಖೆಯ ಎಲ್ಲಾ ಪ್ರಾದೇಶಿಕ ಜಂಟಿ ನಿರ್ದೇಶಕರ ಕಛೇರಿಯ ಸಿಬ್ಬಂದಿಗಳು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಸದರಿ ತರಬೇತಿಗೆ ಹಾಜರಾಗುವಂತೆ ಸೂಚಿಸಿದೆ.









