ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-I, IIA, IIB, IIIA, IIIB, ಪ.ಜಾ ಮತ್ತು ಪ.ಪಂ.ಕ್ಕೆ ಸೇರಿದ ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು https://shp.karnataka.gov.in/bcwd ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 26.06.2025
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ಪ್ರವೇಶಾತಿಗೆ ಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು https://bcwd.karnataka.gov.in/ ನಲ್ಲಿ ನೋಡಬಹುದು.
ಹೆಚ್ಚಿನ ಮಾಹಿತಿಗಾಗಿ : ಇ-ಮೇಲ್ bcwdhelpline@gmail.com ಮೂಲಕ ಅಥವಾ ಜಿಲ್ಲಾ / ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು.
ಸಹಾಯವಾಣಿ ಸಂಖ್ಯೆ : 8050770004\8050770005