ಹಾವೇರಿ : ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ಬದಲಾವಣೆ ಕುರಿತಂತೆ ಚರ್ಚೆಗಳು ನಡೆಯುತ್ತಿರುವ ಹೊತ್ತಲ್ಲೇ ಇದೀಗ ಈಡಿಗ ಸಮುದಾಯದ ಬ್ರಹ್ಮರ್ಷಿ ನಾರಾಯಣಗುರು ಪೀಠದ ಪ್ರಣವಾನಂದ ಸ್ವಾಮೀಜಿ ಬಿ.ಕೆ. ಹರಿಪ್ರಸಾದ್ ಸಿಎಂ ಹುದ್ದೆಗೆ ಅರ್ಹವಾದ ವ್ಯಕ್ತಿ ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಕೆ. ಹರಿಪ್ರಸಾದ್ ಅವರು ೧೮೯ ವರ್ಷ ರಾಜ್ಯಸಭಾ ಸದಸ್ಯರಾಗಿ ಕೆಲಸ ಮಾಡಿದ್ದಾರೆ. 49 ವರ್ಷ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದಿದ್ದಾರೆ. ಈಡಿಗ ಸಮಾಜಕ್ಕೆ ಒಂದೇ ಒಂದು ಸಚಿವ ಸ್ಥಾನ ನೀಡಿದ್ದಾರೆ. ಆದರೆ, ಬಿಜೆಪಿ ಸರಕಾರವಿದ್ದಾಗ ಇಬ್ಬರಿಗೆ ಸಚಿವ ಸ್ಥಾನ, ಮೂವರಿಗೆ ನಿಗಮ ಮಂಡಳಿ ಸ್ಥಾನ ನೀಡಿದ್ದರು.ಆದರೆ, ಸಿಎಂ ಬದಲಾವಣೆ ಮಾಡುವುದಾದರೆ ಈಡಿಗ ಸಮಾಜದ ನಾಯಕ ಬಿ.ಕೆ.ಹರಿಪ್ರಸಾದ್ಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.