ಬೆಂಗಳೂರು : ರಾಜ್ಯದಲ್ಲಿ ಯಾವುದೇ ಖಾಸಗಿ ಸಂಘ-ಸಂಸ್ಥೆ ಅಥವಾ ಸಂಘಟ ನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ, ಚಟುವಟಿಕೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ಅನುಮತಿಪಡೆಯುವುದನ್ನು ಕಡ್ಡಾಯಗೊಳಿ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ.
ಸರ್ಕಾರಿ ಶಾಲಾ – ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ – ಸಂಸ್ಥೆ, ಸಂಘಟನೆಗಳು ತಮ್ಮ ಚಟುವಟಿಕೆಗಳಿಗೆ ಬಳಸುವ ಮುನ್ನ ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಸರ್ಕಾರ, ನಿಗಮ, ಮಂಡಳಿ, ಶಾಲಾ-ಕಾಲೇಜುಗಳು, ಅನು ದಾನಿತ ಶಿಕ್ಷಣ ಸಂಸ್ಥೆ ಗಳು, ಉದ್ಯಾನವನ, ಆಟದ ಮೈದಾನ, ಸಾರ್ವಜನಿಕ ರಸ್ತೆಗಳು, ತೆರೆದ ಸ್ಥಳಗಳು ಮತ್ತು ಇತರೆ ಆಸ್ತಿ ಅಥವಾ ಜಾಗಗಳಿಗೆ ಅನ್ವಯ ಇದು ಅನ್ವಯವಾಗಲಿದೆ.
ಸರ್ಕಾರಿ ಶಾಲಾ – ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ – ಸಂಸ್ಥೆ, ಸಂಘಟನೆಗಳು ತಮ್ಮ ಚಟುವಟಿಕೆಗಳಿಗೆ ಬಳಸುವ ಮುನ್ನ ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಇಂದು ಮುಖ್ಯಮಂತ್ರಿ… pic.twitter.com/Hc522J5XbW
— DIPR Karnataka (@KarnatakaVarthe) October 16, 2025