ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ, ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಸ್ಪೀಕರ್ಗೆ ಪತ್ರ ಬರೆಯಲಾಗಿದೆ. ಸಾಮಾಜಿಕ ಹೋರಾಟಗಾರ ಬಸವರಾಜ್ ಕೊರವರ್ ಅವರು ಪತ್ರ ಬರೆದಿದ್ದಾರೆ.
ಕಳೆದ ಏಪ್ರಿಲ್ 17ರಂದು ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಈ ಒಂದು ಆದೇಶ ಬಂದು 10 ದಿನಗಳಾದರೂ ಕೂಡ ವಿನಯ್ ಕುಲಕರ್ಣಿ ಅವರನ್ನ ಶಾಸಕ ಸ್ಥಾನ ಅನರ್ಹಗೊಳಿಸಿಲ್ಲ. ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಸ್ಪೀಕರ್ ಗೆ ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ್ ಅವರು ಪತ್ರ ಬರೆದಿದ್ದಾರೆ.








