ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಶತಮಾನೋತ್ಸವನ್ನು ಆಯೋಜಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯಿಂದ ಹೊರಡಿಸಿರುವ ಉಲ್ಲೇಖ (1) ರ ಆದೇಶದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆದರ್ಶ ಹಾಗೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾಗಿ ತ್ಯಾಗ-ಬಲಿದಾನಗಳನ್ನು ನೀಡಿದ ನಾಯಕರ ಬಗ್ಗೆ ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ಮತ್ತು ಗಾಂಧೀಜಿಯವರ ಮೌಲ್ಯಗಳನ್ನು ಆದರ್ಶಗಳ ಸಾರ್ವಕಾಲಿಕ ಪ್ರಸ್ತುತತೆಯನ್ನು ಇಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವಿವರಿಸಲಾಗಿರುತ್ತದೆ. ಸದರಿ ಆದೇಶದ ಪ್ರತಿಯನ್ನು ಈ ಸುತ್ತೊಲೆಯೊಂದಿಗೆ ಲಗತ್ತಿಸಲಾಗಿದ್ದು, ಈ ಇಲಾಖಾ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ/ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ಸದರಿ ಆದೇಶದಲ್ಲಿ ಸೂಚಿಸಿರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ.