ಬೆಂಗಳೂರು : ಈಗಾಗಲೇ ರೈತ ವಿರೋಧಿ ಕಾನೂನು ರದ್ದುಗೊಳಿಸಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ದೆಹಲಿಯಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ . ಇದರ ಬೆನ್ನಲ್ಲೇ ರಾಜ್ಯದಲ್ಲಿಯೂ ಕೂಡ ರೈತ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದ್ದು ಫೆಬ್ರವರಿ 17ರಂದು ಅಂದರೆ ನಾಡಿದ್ದು ಬೆಂಗಳೂರು ಚಲೋ ಗೆ ಕರೆ ನೀಡಿವೆ ಎಂದು ಹೇಳಲಾಗುತ್ತಿದೆ.

ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಆಶ್ರಯದಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಫೆ.17ರಂದು ʻಬೆಂಗಳೂರು ಚಲೋʼ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಬರುವ ರೈತರಿಗೆ ಆಯಾ ಜಿಲ್ಲೆಗಳಿಂದ ಉಚಿತ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಅಧ್ಯಕ್ಷ ಬೀರಪ್ಪ ದೇಶನೂರ ತಿಳಿಸಿದ್ದಾರೆ.

ಫೆ.16ರಂದು ಸಂಜೆ ಪ್ರತಿಯೊಬ್ಬ ರೈತರೂ ತಮ್ಮ ಜಿಲ್ಲೆಯ ಹಾಗೂ ತಾಲೂಕು, ಪಟ್ಟಣ, ಗ್ರಾಮಗಳಿಂದ ಬೆಂಗಳೂರಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ.ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಫೆ.17ರಂದು ರೈತರು ತಮ್ಮ ಬೇಡಿಕೆಗಳನ್ನು ಆಗ್ರಹಿಸಿ ಮುಖ್ಯಮಂತ್ರಿಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಈ ಬೃಹತ್‌ ಸಮಾವೇಶದಲ್ಲಿ ರಾಜ್ಯಾದ್ಯಂತ ಸುಮಾರು 15 ಸಂಘಟನೆಗಳ ರೈತ ಮುಖಂಡರು, ರೈತ ಮಹಿಳೆಯರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಲೋಕಸಭಾ ಚುನಾವಣೆ ಮೇಲೆ ಸಿಎಂ ಸಿದ್ದರಾಮಯ್ಯ ಕಣ್ಣು : ಸರ್ಕಾರದ ಮುಂದಿರುವ ಸವಾಲುಗಳೇನು?

ವಿಜಯಪುರ : ಅಕ್ರಮವಾಗಿ ಗೋವುಗಳ ಸಾಗಣೆ : ಗ್ರಾಮಸ್ಥರಿಂದ 110ಕ್ಕೂ ಹೆಚ್ಚು ಜಾನುವಾರುಗಳ ರಕ್ಷಣೆ

CBSE Board Exam 2023 : ಇಂದಿನಿಂದ ಸಿಬಿಎಸ್‌ಇ 10,12ನೇ ತರಗತಿ ಬೋರ್ಡ್ ಪರೀಕ್ಷೆ ಆರಂಭ,ಮಾರ್ಗಸೂಚಿ ಬಿಡುಗಡೆ

Share.
Exit mobile version