ಬೆಂಗಳೂರು : ಜಪ್ತಿ ಮಾಡಿದ್ದ ವಸ್ತುಗಳನ್ನು ಹಿಂತಿರುಗಿಸಿಲ್ಲ ಎಂದು ಆರೋಪಿಸಿ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧವೇ ಇದೀಗ ಎಫ್ಐಆರ್ ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೌದು ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧವೇ fir ದಾಖಲಾಗಿದೆ. ಜೆಪಿ ನಗರ ಠಾಣೆಯಲ್ಲಿ ಇನ್ಸ್ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ಎಂ ಎಸ್ ಹಿತೇಂದ್ರ ಜೆಪಿ ನಗರ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಕೆಲ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಸ್ಸು ನೀಡಿರಲಿಲ್ಲ.ಅಲ್ಲದೆ ಹಿಂದಿನ ಇನ್ಸ್ಪೆಕ್ಟರ್ ಹಸ್ತಾಂತರಿಸಿದ ಮಾಲೂ ಸಹ ಹಾಜರುಪಡಿಸಿರಲಿಲ್ಲ. ಜಪ್ತಿ ಮಾಡಿದ್ದ ವಸ್ತುಗಳನ್ನು ವಾಪಸ್ ನೀಡುವಂತೆ ಹಲವು ಬಾರಿ ಸೂಚನೆ ನೀಡಲಾಗಿತ್ತು. ಈ ಕುರಿತು ದಕ್ಷಿಣ ವಿಭಾಗದ ಡಿಸಿಪಿ ಜ್ಞಾಪನ ಪತ್ರ ನೀಡಿದರು ಸಹ ಉತ್ತರ ನೀಡಿರಲಿಲ್ಲ.
ಜಪ್ತಿ ಮಾಡಿದ್ದ ಮಾಲು ಹಿಂದಿರುಗಿಸದೆ ದುರುಪಯೋಗ ಪಡಿಸಿಕೊಂಡ ಹಿನ್ನೆಲೆಯಲ್ಲಿ ಜೆಪಿ ನಗರ ಠಾಣೆಯ ಹಿಂದಿನ ಇನ್ಸ್ಪೆಕ್ಟರ್ ಜಿತೇಂದ್ರ ಎಂಎಸ್ ವಿರುದ್ಧ ಇದೀಗ ಹಾಲಿ ಇನ್ಸ್ಪೆಕ್ಟರ್ ಆಗಿರುವಂತಹ ರಾಧಾಕೃಷ್ಣ ಎಫ್ ಐ ಆರ್ ದಾಖಲಿಸಿದ್ದಾರೆ.