ಬೆಂಗಳೂರು : ಬೆಂಗಳೂರಲ್ಲಿ ಶಾಲೆ ಮುಗಿಸಿಕೊಂಡು ಮನೆಗೆ ತೆರಳುವ ವೇಳೆ ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್ ಮರದ ತುಂಡು ಬಿದ್ದು 15 ವರ್ಷದ ಬಾಲಕಿ ತೇಜಸ್ವಿನಿ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಕಟ್ಟಡದ ಇಂಜಿನಿಯರ್ ಚಂದ್ರಶೇಖರ್ ಎನ್ನುವವರನ್ನು ವಿವಿ ಪುರಂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹೌದು ಕಟ್ಟಡ ನಿರ್ಮಾಣ ಮಾಡುತ್ತಿರುವ ಇಂಜಿನಿಯರ್ ಅನ್ನು ವಿವಿ ಪುರಂ ಠಾಣೆ ಪೋಲಿಸಿರುವ ಅವಶ್ಯಕತೆ ಪಡೆದುಕೊಂಡು ಸದ್ಯ ವಿಚಾರಣೆ ನಡೆಸುತ್ತಿದ್ದಾರೆ.ಘಟನೆ ಸಂಬಂಧ ತೇಜಸ್ವಿನಿ ತಂದೆ ಸುಧಾಕರ್ ರಾವ್ ಅವರು ನೀಡಿದ ದೂರಿನ ಮೇರೆಗೆ ಕಟ್ಟಡ ಮಾಲಿಕ, ಗುತ್ತಿಗೆದಾರ, ಎಂಜಿನಿಯರ್, ಬಿಬಿಎಂಪಿ ಅಧಿಕಾರಿಗಳು ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಇನ್ನು ಕಟ್ಟಡ ಮಾಲಿಕ, ಗುತ್ತಿಗೆದಾರ ಹಾಗೂ ಘಟನೆ ವೇಳೆ ಕೆಲಸ ಮಾಡುತ್ತಿದ್ದ ಕಟ್ಟಡ ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಇನ್ನು ಕಟ್ಟಡ ನಿರ್ಮಾಣ ಮಾಡಲು ಅನುಮತಿ ನೀಡಿದ ಬಿಬಿಎಂಪಿ ಅಧಿಕಾರಿಗಳು ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲಿಸಿಲ್ಲ ಎಂಬುದು ಗೊತ್ತಾಗಿದೆ. ಎಲ್ಲಾ ಆರೋಪಿಗಳನ್ನು ಸದ್ಯದಲ್ಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದರು.